ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಫೀಸ್ ಮಿಯಾನ್ನವರ್ ಗೆ 14 ದಿನ ನ್ಯಾಯಾಂಗ ಬಂಧಿಸಿ ಕೋರ್ಟ್ ಆದೇಶಿಸಿದೆ.
ಎಸ್, ಆರೋಪಿ ಮುಸ್ಲಿಂ ಯುವಕ ಮುಫೀಸ್ ಮಿಯಾನ್ನವರ್ ಹಿಂದೂ ಯುವತಿಯನ್ನು ಪ್ರೀತಿಸುವ ನಾಟಕವಾಡಿ ಲೈಂಗಿಕ ದೌರ್ಜನ್ಯ ಎಸಗಿದ ಬಳಿಕ ಧಾರವಾಡದಲ್ಲಿ ರಿಜಿಸ್ಟರ್ ಮದುವೆ ಆಗಲು ತಯಾರಿ ನಡೆಸಿದ್ದ. ಅಷ್ಟರಲ್ಲಿ ವಿಷಯ ತಿಳಿದ ಯುವತಿ ಕುಟುಂಬಸ್ಥರು ಮದುವೆ ನಿಲ್ಲಿಸಿದ್ದಾರೆ. ಇದಾದ ಬಳಿಕ ಮುಫೀಸ್ ಯುವತಿಗೆ ಬ್ಲ್ಯಾಕ್ ಮೇಲ್ ಮಾಡೋಕೆ ಶುರು ಮಾಡಿದ್ದಾನೆ. ತನ್ನ ಖಾಸಗಿ ವಿಡಿಯೋ ವೈರಲ್ ಮಾಡೋದಾಗಿ ಬೆದರಿಕೆ ಹಾಕಿದ್ದಾನೆ. ಅಷ್ಟೇ ಅಲ್ಲದೇ ಯುವತಿ ಮನೆಯಲ್ಲಿ ಒಂಟಿಯಾಗಿದ್ದಾಗ, ಮನೆಗೆ ನುಗ್ಗಿ ಅತ್ಯಾಚಾರ ಮಾಡಿದ್ದಾನೆ.
ಈ ವಿಷಯ ಯಾರಿಗಾದ್ರೂ ತಿಳಿಸಿದ್ರೆ, ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ ಎಂದು ಯುವತಿ ದೂರು ನೀಡಿದ್ದಾರೆ. ಯುವತಿ ದೂರು ಆಧರಿಸಿ ಆರೋಪಿ ಮುಫೀಸ್ ಮಿಯಾನ್ನವರ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಆರೋಪಿ ಮುಫೀಸ್‌ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.



