ಬೆಂಗಳೂರು: ರಾಜ್ಯದಲ್ಲಿ ‘ಪ್ರಜ್ವಲ್ ರೇವಣ್ಣ ಮಾದರಿ’ಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲಿ ಖಾಸಗಿ ಶಾಲೆಯೊಂದರ ದೈಹಿಕ ಶಿಕ್ಷಕನಾಗಿರುವ ಮ್ಯಾಥ್ಯೂ ಎನ್ನುವಾತನ ವಿರುದ್ಧ ಸಂತ್ರಸ್ತೆಯೊಬ್ಬಳು ಗಂಭೀರ ಆರೋಪ ಮಾಡಿದ್ದಾಳೆ. ನನ್ನನ್ನ ದೈಹಿಕವಾಗಿ ಬಳಸಿಕೊಂಡು ವಿಡಿಯೋ ರೆಕಾರ್ಡ್ ಮಾಡಿದ್ದಾನೆ ಎಂದು ಆರೋಪಿದ್ದಾಳೆ.
ಕೆಲವು ಮಹಿಳೆಯರು ಮತ್ತು ಯುವತಿಯರ ಜೊತೆಗಿರುವ ಖಾಸಗಿ ಕ್ಷಣವನ್ನು ಮ್ಯಾಥ್ಯೂ ಸೆರೆ ಹಿಡಿದುಕೊಂಡಿದ್ದಾನೆ. ಸುಮಾರು 2500 ವಿಡಿಯೋಗಳಿವೆ ಎಂಬುವುದನ್ನು ಸಂತ್ರಸ್ತೆ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಮ್ಯಾಥ್ಯೂ ವಿರುದ್ಧ ಮಹಿಳಾ ಆಯೋಗದ ಮೆಟ್ಟಿಲೇರಿದ್ದಾಳೆ ಎಂದು ತಿಳಿದುಬಂದಿದೆ.
ತನ್ನನ್ನು ದೈಹಿಕವಾಗಿ ದುರ್ಬಳಕೆ ಮಾಡಿಕೊಂಡು, ಖಾಸಗಿ ಕ್ಷಣಗಳನ್ನು ವಿಡಿಯೋ ರೆಕಾರ್ಡ್ ಮಾಡಿದ್ದಾನೆ ಎಂದು ಆರೋಪಿಸಿದ್ದಾಳೆ. ಇದಲ್ಲದೇ, ಇತರ ಹಲವಾರು ಮಹಿಳೆಯರು ಮತ್ತು ಯುವತಿಯರ ಜೊತೆಗಿನ ಖಾಸಗಿ ಕ್ಷಣಗಳನ್ನು ಸಹ ಮ್ಯಾಥ್ಯೂ ಸೆರೆಹಿಡಿದುಕೊಂಡಿದ್ದು, ಒಟ್ಟು 2500 ವಿಡಿಯೋಗಳು ಆತನ ಬಳಿಯಿವೆ ಎಂಬ ಆರೋಪ ಕೇಳಿಬಂದಿದೆ.
ಸಂತ್ರಸ್ತೆಯ ದೂರಿನ ಪ್ರಕಾರ, ಮ್ಯಾಥ್ಯೂ ತನ್ನ ಖಾಸಗಿ ಕ್ಷಣಗಳ ವಿಡಿಯೋಗಳನ್ನು ರೆಕಾರ್ಡ್ ಮಾಡಿದ್ದಾನೆ. ಈ ಆರೋಪಗಳಿಗೆ ಪುಷ್ಟಿ ನೀಡುವಂತೆ ಕೆಲವು ಅಶ್ಲೀಲ ಫೋಟೋಗಳು ಮತ್ತು ವಿಡಿಯೋಗಳು ಸಂತ್ರಸ್ತೆಯ ಬಳಿಯಿವೆ. ಈ ವಿಡಿಯೋಗಳಲ್ಲಿ ಇತರ ಯುವತಿಯರು ಮತ್ತು ಮಹಿಳೆಯರ ಜೊತೆಗಿನ ದೃಶ್ಯಗಳೂ ಇವೆ ಎಂದು ಹೇಳಲಾಗಿದೆ.ನ್ಯಾಯಕ್ಕಾಗಿ ಮಹಿಳೆ ಕೋಣನಕುಂಟೆ ಪೊಲಿಸ್ ಠಾಣೆ ಮೆಟ್ಟಿಲೇರಿದ್ದಾರೆ.