ಚಿತ್ರದುರ್ಗ:- ಪೋಕ್ಸೋ ಕೇಸ್‌ನಲ್ಲಿ ಮುರುಘಾ ಶ್ರೀ ಸೇರಿ ಇನ್ನಿಬ್ಬರನ್ನು ಖುಲಾಸೆಗೊಳಿಸಿರುವ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಂತ್ರಸ್ತ ಬಾಲಕಿಯರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ನಮ್ಮ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಪೋಕ್ಸೊ ಪ್ರಕರಣದಲ್ಲಿ ಶಿವಮೂರ್ತಿ ಮುರುಘಾ ಶರಣರು ಹಾಗೂ ಇನ್ನಿಬ್ಬರನ್ನು ಖುಲಾಸೆಗೊಳಿಸಿರುವ ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಬೇಕು’ ಎಂದು ಕೋರಿ ಸಂತ್ರಸ್ತ ಬಾಲಕಿಯರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
2022ರ ಆಗಸ್ಟ್ 26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 3 ವರ್ಷಗಳ ಸುದೀರ್ಘ ತನಿಖೆ ಬಳಿಕ ಚಿತ್ರದುರ್ಗದ 2ನೇ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯದ ನ್ಯಾ.ಗಂಗಾಧರಪ್ಪ ಚನ್ನಬಸಪ್ಪ ಹಡಪದ್ ಅವರಿದ್ದ ಪೀಠ ಸ್ಯಾಕ್ಷಧಾರಗಳ ಕೊರತೆಯಿಂದ ಖುಲಾಸೆಗೊಳಿಸಿತ್ತು. ಇದರಿಂದಾಗಿ ಹೋರಾಟಕ್ಕೆ ಮುಂದಾಗಿರುವ ಸಂತ್ರಸ್ತೆಯರು ಇಂದು ಹೈಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.
ಇನ್ನೂ ಪೋಕ್ಸೋ ಕೇಸಲ್ಲಿ ದಾಖಲಾಗಿದ್ದ ಮೊದಲ ಕೇಸ್‌ನಲ್ಲಿ ಮುರುಘಾ ಶ್ರೀಗಳು ಖುಲಾಸೆಗೊಂಡಿದ್ದಾರೆ. ಆದರೂ ಶ್ರೀಗಳಿಗೆ ರಿಲೀಫ್ ಇಲ್ಲ. 2ನೇ ಕೇಸ್ ಹೈಕೋರ್ಟ್‌ನಲ್ಲಿ ಇತ್ಯರ್ಥವಾಗಬೇಕಿದ್ದು, ಮುಂದಿನ ತಿಂಗಳು ವಿಚಾರಣೆಗೆ ಬರಲಿದೆ. ಈ ಪ್ರಕರಣದಲ್ಲಿ ಅಡುಗೆ ಸಹಾಯಕಿ ಕೋರ್ಟ್ ಮೆಟ್ಟಿಲೇರಿದ್ದು, ಪ್ರಕರಣವನ್ನು ವಜಾಗೊಳಿಸುವಂತೆ ಶ್ರೀಗಳು ಕೋರ್ಟ್ ಮೊರೆ ಹೋಗಿದ್ದಾರೆ.



