ಮತ್ತೊಂದು ದರೋಡೆ ಪ್ರಕರಣ: ಉಳ್ಳಾಲದಲ್ಲಿ ಬಂದೂಕು ತೋರಿಸಿ ಹಾಡುಹಗಲೇ ಬ್ಯಾಂಕ್‌ ಲೂಟಿ!

0
Spread the love

ಮಂಗಳೂರು: ಗುರುವಾರ ಇಡೀ ಬೀದರ್ ಬೆಚ್ಚಿಬಿದ್ದಿತ್ತು. ಬೆಳಗ್ಗೆ 11 ಗಂಟೆ ಸುಮಾರಿಗೆ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ನ್ಯಾಯಾಲಯದ ಸನಿಹದಲ್ಲೇ ದರೋಡೆಕೋರರು ಅಟ್ಟಹಾಸ ಮೆರೆದಿದ್ದರು. ಇದೀಗ ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಉಳ್ಳಾಲದಲ್ಲೂ ಹಾಡಹಗಲೇ ಬ್ಯಾಂಕ್ ದರೋಡೆ ಮಾಡಲಾಗಿದೆ.

Advertisement

ಉಳ್ಳಾಲ ತಾಲೂಕಿನ ಕೆಸಿ ರೋಡ್​​ನ ಕೋಟೆಕಾರು ಬ್ಯಾಂಕ್​ಗೆ ನುಗ್ಗಿದ ಐವರು ಮುಸುಕುಧಾರಿಗಳು ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿ, ಅಧಿಕಾರಿಗಳನ್ನು ಬೆದರಿಸಿ ಚಿನ್ನಾಭರಣ, ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ.

ಹಾಡಹಗಲೇ ಬ್ಯಾಂಕ್​ಗೆ ನುಗಿದ ಐವರು ದರೋಡೆಕೋರರು ಕೃತ್ಯ ಎಸಗಿದ್ದಾರೆ. ಬಂದೂಕಿನಿಂದ ಬ್ಯಾಂಕ್​​ ಸಿಬ್ಬಂದಿಯನ್ನು ಬೆದರಿಸಿ ಚಿನ್ನಾಭರಣ, ನಗದು ಕಳ್ಳತನ ಮಾಡಿದ್ದಾರೆ. ಹಣ, ಚಿನ್ನಾಭರಣದೊಂದಿಗೆ ಕಾರಿನಲ್ಲಿ ಪರಾರಿಯಾಗಿದ್ದಾರೆ.

ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ಕಾರಣ ಹೆಚ್ಚಿನ ಪೊಲೀಸರು ಅದರ ಭದ್ರತೆಗೆ ತೆರಳಿದ್ದರು. ಇದನ್ನೇ ಟಾರ್ಗೆಟ್ ಮಾಡಿಕೊಂಡು ದರೋಡೆಗೆ ಸಂಚು ರೂಪಿಸಿದ್ದ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಠಾಣೆ ಪೊಲೀಸರು, ಶ್ವಾನದಳ ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here