ಬೆಳಗಾವಿ:- ಕರ್ನಾಟಕದಲ್ಲಿ ಫೈನಾನ್ಸ್ ಕಿರುಕುಳಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿದೆ. ಅದರಂತೆ ಇಲ್ಲೋರ್ವ ರೈತ ಮೈಕ್ರೋ ಫೈನಾನ್ಸ್ ಕಿರುಕುಳದಿಂದಾಗಿ ವಿಷ ಸೇವಿಸಿ ಸೂಸೈಡ್ ಮಾಡಿಕೊಂಡಿದ್ದಾರೆ.
ಈ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ಜರುಗಿದೆ. 66 ವರ್ಷದ ಶಿವನಪ್ಪ ಧರ್ಮಟ್ಟಿ ಆತ್ಮಹತ್ಯೆಗೆ ಶರಣಾದ ರೈತ. ಕ್ಯಾನ್ಸರ್ ಪೀಡಿತ ಪತ್ನಿ ಚಿಕಿತ್ಸೆಗಾಗಿ ವಿವಿಧ ಫೈನಾನ್ಸ್ ಕಂಪನಿಗಳಿಂದ 10 ಲಕ್ಷ ರೂಪಾಯಿ ಸಾಲ ಮಾಡಿದ್ದ. ಆದ್ರೆ, ಆ ಸಾಲವನ್ನು ಮರು ಪಾವತಿಸುವಂತೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡಲಾರಂಭಿಸಿವೆ. ಸಾಲ ಮರು ಪಾವತಿಸುವಂತೆ ಫೈನಾನ್ಸ್ ಸಿಬ್ಬಂದಿ, ರೈತ ಶಿವನಪ್ಪ ಮನೆ ಬಳಿ ಬಂದು ಗಲಾಟೆ ಮಾಡಿದ್ದಾರೆ. ಅಲ್ಲದೇ ಪದೇ ಪದೇ ಫೋನ್ ಮಾಡಿ ಕಿರುಕುಳ ನೀಡಿದ್ದಾರೆ.
ಇದರಿಂದ ಬೇಸತ್ತು ಶಿವನಪ್ಪ ಫೆಬ್ರವರಿ 3ರ ಸೋಮವಾರ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ್ದಾರೆ.