Gold Price Hike: ಆಭರಣ ಪ್ರಿಯರಿಗೆ ಮತ್ತೆ ಶಾಕ್‌: 1 ಲಕ್ಷ ರೂ. ತಲುಪಿದ ಚಿನ್ನದ ಬೆಲೆ!

0
Spread the love

ಬೆಂಗಳೂರು: ಭಾರತದಂತಹ ದೇಶದಲ್ಲಿ ಚಿನ್ನಕ್ಕೆ ಮೊದಲಿನಿಂದಲೂ ಪ್ರಾಮುಖ್ಯತೆಯಿದೆ. ಹಬ್ಬ ಹರಿದಿನ, ಮದುವೆ ಮತ್ತಿತರ ಶುಭ ಕಾರ್ಯಕ್ರಮಗಳಲ್ಲಿ ಚಿನ್ನದ ಅಂಗಡಿಗಳು ಗ್ರಾಹಕರಿಂದ ತುಂಬಿ ತುಳುಕುತ್ತವೆ. ಹೂಡಿಕೆಯಲ್ಲೂ ಚಿನ್ನ ಪ್ರಮುಖ ಪಾತ್ರ ವಹಿಸುತ್ತದೆ. ಇದೀಗ ಬಂಗಾರ ದಿನದಿಂದ ದಿನಕ್ಕೆ ಗ್ರಾಹಕರ ಕೈ ಸುಡುತ್ತಿದೆ.

Advertisement

10 ಗ್ರಾಂ ಚಿನ್ನದ ಬೆಲೆ 1 ಲಕ್ಷ ರೂ. ದಾಟಿ ಸಾರ್ವಕಾಲಿಕ ದಾಖಲೆ ಬರೆದಿದೆ.10 ಗ್ರಾಂ ಚಿನ್ನದ ಬೆಲೆ 1 ಲಕ್ಷ ರೂ. ದಾಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಮಂಗಳವಾರ 1 ಗ್ರಾಂಗೆ 10,135 ರೂ. ತಲುಪಿದ್ದು, 10 ಗ್ರಾಂಗೆ 1,01,135 ರೂ.ಗೆ ಏರಿಕೆಯಾಗಿದೆ. ಇದೇ ಮೊದಲ ಬಾರಿಗೆ ಭಾರತದಲ್ಲಿ ಚಿನ್ನದ ಬೆಲೆ 1 ಲಕ್ಷ ರೂ. ದಾಟಿದೆ.

22 ಕ್ಯಾರೆಟ್ ಚಿನ್ನದ ಬೆಲೆ 1 ಗ್ರಾಂಗೆ 9,290 ರೂ.ಗೆ ಏರಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆ 92,900 ರೂ. ತಲುಪಿದೆ. ಇತರೆ ದೇಶಗಳ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಸುಂಕ ವಿಧಿಸಿದ್ದೇ ಚಿನ್ನದ ಬೆಲೆ ದಾಖಲೆಯ ಏರಿಕೆಗೆ ಕಾರಣ ಎನ್ನಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಬೆಲೆ ಏರಿಕೆ ಕಂಡಿದೆ. ಹೀಗಾಗಿ, ಸುರಕ್ಷಿತ ಹೂಡಿಕೆಗಾಗಿ ಹೂಡಿಕೆದಾರರು ಚಿನ್ನದತ್ತ ಆಕರ್ಷಿತರಾಗಿದ್ದಾರೆ.

 


Spread the love

LEAVE A REPLY

Please enter your comment!
Please enter your name here