ಮತ್ತೊಂದು ಕಾಲ್ತುಳಿತ ದುರಂತ: ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ 9 ಮಂದಿ ಸಾವು

0
Spread the love

ಆಂಧ್ರಪ್ರದೇಶ: ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ಕಾಲ್ತುಳಿತ ಸಂಭವಿಸಿ 9 ಜನ ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗದಲ್ಲಿರುವ ಶ್ರೀ ವೆಂಕಟಸ್ವಾಮಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಭಕ್ತರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

Advertisement

ಕಾರ್ತಿಕಮಾಸದ ಸಮಯದಲ್ಲಿ ‘ಏಕಾದಶಿ’ಯ ಕಾರಣ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದರು.  ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಅಧಿಕಾರಿಗಳಿಗೆ ನಿಯಂತ್ರಿಸಲು ಸಾಧ್ಯವಾಗದೆ ಕಾಲ್ತುಳಿತ ಸಂಭವಿಸಿದೆ. ಆಂಧ್ರಪ್ರದೇಶದಲ್ಲಿ ಈ ಹಿಂದೆ ತಿರುಪತಿ ತಿರುಮಲ ದೇವಸ್ಥಾನದ ಆವರಣದಲ್ಲೂ ಕಾಲ್ತುಳಿತ ಸಂಭವಿಸಿತ್ತು. ಈಗ ಮತ್ತೆ ಶ್ರೀಕಾಕುಳಂ ಜಿಲ್ಲೆಯಲ್ಲಿ ಕಾಲ್ತುಳಿತ ಸಂಭವಿಸಿದೆ.

ಕಾಲ್ತುಳಿತ ದುರಂತಕ್ಕೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಆಘಾತ ವ್ಯಕ್ತಪಡಿಸಿದ್ದು, ಭಕ್ತರ ಸಾವು ಹೃದಯವಿದ್ರಾವಕ ಎಂದು ವಿಷಾದಿಸಿದ್ದಾರೆ. ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗದಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ನಡೆದ ಕಾಲ್ತುಳಿತ ಘಟನೆ ಆಘಾತವನ್ನುಂಟು ಮಾಡಿದೆ.

ಈ ದುರಂತ ಘಟನೆಯಲ್ಲಿ ಭಕ್ತರ ಸಾವು ಅತ್ಯಂತ ಹೃದಯವಿದ್ರಾವಕವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರಿಗೆ ತ್ವರಿತ ಮತ್ತು ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ನಾಯ್ಡು ತಿಳಿಸಿದ್ದಾರೆ. ಸ್ಥಳೀಯ ಅಧಿಕಾರಿಗಳು ಮತ್ತು ಸಾರ್ವಜನಿಕ ಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕ್ರಮಗಳನ್ನು ಮೇಲ್ವಿಚಾರಣೆ ಮಾಡುವಂತೆ ಸಿಎಂ ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here