ಕೆಜಿಎಫ್ ಸಿನಿಮಾದ ಬಳಿಕ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಸಿನಿಮಾ ಆರಂಭಕ್ಕೂ ಮುನ್ನವೇ ಕುತೂಹಲ ಕೆರಳಿಸಿರುವ ಟಾಕ್ಸಿಕ್ ಸಿನಿಮಾದ ಶೂಟಿಂಗ್ ಸದ್ಯ ಮುಂಬೈನಲ್ಲಿ ನಡೆಯುತ್ತಿದೆ. ಸಿನಿಮಾದಲ್ಲಿ ನಟಿ ಕಿಯಾರಾ ನಾಯಕಿಯಾಗಿ ಕಾಣಿಸಿಕೊಳ್ತಿದ್ದಾರೆ. ಇದೀಗ ಮತ್ತೋರ್ವ ಸ್ಟಾರ್ ನಟಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಮುಂಬೈನಲ್ಲಿ ನಡೆಯುತ್ತಿದ್ದ ಸಿನಿಮಾ ಶೂಟಿಂಗ್ ಸ್ಥಳದಲ್ಲಿ ನಟಿ ಹುಮಾ ಖುರೇಶಿ ಕಾಣಿಸಿಕೊಂಡಿದ್ದಾರೆ. ಹಾಗಾಗಿ ‘ಟಾಕ್ಸಿಕ್’ ಸಿನಿಮಾಗೆ ನಟಿ ಎಂಟ್ರಿ ಕೊಟ್ಟಿರುವ ಬಗ್ಗೆ ಚರ್ಚೆ ಶುರುವಾಗಿದೆ. ಸೆಟ್‌ಗೆ ಬರುತ್ತಿರುವ ನಟಿಯ ವಿಡಿಯೋ ಇಂಟರ್‌ನೆಟ್‌ನಲ್ಲಿ ವೈರಲ್ ಆಗುತ್ತಿದೆ. ಹುಮಾ ಖುರೇಶಿ ನಟಿಸುತ್ತಿರುವ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.
ಮಲಯಾಳಂ ಖ್ಯಾತ ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶನ ಮಾಡುತ್ತಿದ್ದು, ಕೆವಿಎನ್ ಸಂಸ್ಥೆ ಜೊತೆ ಯಶ್ ಕೂಡ ಜಂಟಿಯಾಗಿ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. ಬಹುಭಾಷೆಗಳಲ್ಲಿ ಸಿನಿಮಾ ತೆರೆಗೆ ಬರಲಿದೆ.
ಆ.8ರಂದು ‘ಟಾಕ್ಸಿಕ್’ ಸಿನಿಮಾದ ಮುಹೂರ್ತ ಸರಳವಾಗಿ ಜರುಗಿತ್ತು. ‘ಟಾಕ್ಸಿಕ್’ ಚಿತ್ರದ ಶೂಟಿಂಗ್ ಬೆಂಗಳೂರಿನಲ್ಲಿ ಚಿತ್ರೀಕರಿಸಲಾಗಿದೆ. ಟಾಕ್ಸಿಕ್ ಸಿನಿಮಾವೂ ಡ್ರಗ್ಸ್ ಮಾಫಿಯಾ ಕುರಿತಾದ ಕಥೆ ಎನ್ನಲಾಗುತ್ತಿದೆ.



