ಬೆಂಗಳೂರಿನಲ್ಲಿ ಮತ್ತೊಬ್ಬ ಶಂಕಿತ ಉಗ್ರನ ಬಂಧನ!

0
Spread the love

ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನವಾಗಿದೆ. ಗಿರೀಶ್ ಬೋರಾ ಅಲಿಯಾಸ್ ಗೌತಮ್ ಬಂಧಿತ ಆರೋಪಿ. ಗುವಾಹಟಿಯಲ್ಲಿ ಸುಧಾರಿತ ಸ್ಫೋಟಕವೊಂದನ್ನು ಇಟ್ಟು ಪರಾರಿಯಾಗಿದ್ದ ಆತನ ಬೆನ್ನು ಬಿದ್ದಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ ಆತನನ್ನು ಬೆಂಗಳೂರಿನಲ್ಲಿ ಪತ್ತೆ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಶಂಕಿತ ಉಗ್ರ ಖಾಸಗಿ ಕಂಪನಿಯಲ್ಲಿ ಗೌತಮ್ ಎನ್ನುವ ಹೆಸರಲ್ಲಿ ಸೆಕ್ಯೂರಿಟಿಯಾಗಿ ಕೆಲಸಕ್ಕೆ ಸೇರಿದ್ದನು.

Advertisement

ಈ ಬಗ್ಗೆ ಪಕ್ಕಾ ಮಾಹಿತಿ ಆಧರಿಸಿದ ಅಸ್ಸಾಂ ಎನ್ಐಎ ಟೀಂ, ಶಂಕಿತ ಉಗ್ರನನ್ನು ಇದೀಗ ಬಂಧಿಸಿದೆ. ಬೆಂಗಳೂರಿನ ಜಿಗಣಿಯಲ್ಲಿ ವಾಸವಿದ್ದ ಈ ಶಂಕಿತ ಉಗ್ರ, ಇಲ್ಲಿಯೂ ಒಂದಷ್ಟು ಪ್ಲ್ಯಾನ್​ಗಳನ್ನು ನಡೆಸುತ್ತಿದ್ದ ಅನುಮಾನ ವ್ಯಕ್ತವಾಗಿದೆ. ಸದ್ಯ ಶಂಕಿತನನ್ನ ಬಂಧಿಸಿರೋ ಅಧಿಕಾರಿಗಳು, ಬಂಧಿತನಿಂದ ಮೊಬೈಲ್ ಮತ್ತು ಒಂದಷ್ಟು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.


Spread the love

LEAVE A REPLY

Please enter your comment!
Please enter your name here