ಕಾರವಾರ:- ವಸಂತ್ ನಾಯ್ಕ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಜ್ಯೋತಿಷಿ ಕಮಲಾಕರ್ ಭಟ್ ಮೇಲೆ ಮತ್ತೊಂದು ಕೇಸ್ ದಾಖಲಾಗಿದೆ.
ಅಪ್ರಾಪ್ತ ವಯಸ್ಸಿನ ಬಾಲಕಿಯ ಮೈ ಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ. ಹೀಗಾಗಿ ಸದ್ಯ ಜೈಲಿನಿಂದ ಹೊರಬರುವುದು ಭಾರೀ ಕಷ್ಟವಾಗಿದೆ.
ವಸಂತ್ ನಾಯ್ಕ ಕೊಲೆ ಪ್ರಕರಣದಲ್ಲಿ ಜ್ಯೋತಿಷಿ ಕಮಲಾಕರ್ ಸದ್ಯ ಜೈಲು ಸೇರಿದ್ದಾರೆ. ಈ ಮಧ್ಯೆ ಅವರ ವಿರುದ್ಧ ಇನ್ನೊಂದು ಕೇಸ್ ದಾಖಲಾಗಿದ್ದು, ಭಾರೀ ಸಂಕಷ್ಟ ತಂದೊಡ್ಡಿದೆ.



