ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಬೈಕ್ ಸವಾರ ಬಲಿಆಯಗಿರುವ ಘಟನೆ ಟಾಟಾ ಇನ್ ಸ್ಟಿಟ್ಯೂಟ್ ಮುಂಭಾಗದಲ್ಲಿ ನಡೆದಿದೆ. ಯಲಹಂಕದಿಂದ ಯಶವಂತಪುರಕ್ಕೆ ಬರುತ್ತಿದ್ದ ಬಸ್ ಬೈಕ್ ಸವಾರನ ಮೇಲೆ ಹರಿದಿದೆ.
Advertisement
ಬಸ್ ಹರಿದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಯಶವಂತಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.