ಹೃದಯಾಘಾತಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿ: 17 ವರ್ಷದ ವಿದ್ಯಾರ್ಥಿ ಸಾವು

0
Spread the love

ಕಲಬುರಗಿ: ಹೃದಯಾಘಾತಕ್ಕೆ ವಯಸ್ಸಾದವರೇ ಬಲಿಯಾಗುತ್ತಾರೆ ಎಂದು ಹೇಳಲು ಸಾಧ್ಯವಾಗದಂತಹ ಸ್ಥಿತಿ ಬಂದಿದೆ. ಇತ್ತೀಚೆಗೆ ಯುವಜನರು ಹೃದಯಾಘಾತಕ್ಕೆ ಬಲಿಯಾಗುವ ಪ್ರಕರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಆದರೆ ಇದೀಗ 17 ವರ್ಷದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ  ಘಟನೆ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದಲ್ಲಿ ನಡೆದಿದೆ.

Advertisement

ಕೋರೇಶ್ ಸಿದ್ದಣ್ಣ ಮದ್ರಿ ಮೃತಪಟ್ಟ ಯುವಕ. ಕಲಬುರಗಿ ನಗರದಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಕೋರೇಶ್ ಗ್ರಾಮದಲ್ಲಿ ಸ್ನೇಹಿತರ ಜೊತೆ ಕುಳಿತಾಗ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಗೆಳೆಯನೊಬ್ಬ ಕೋರೇಶ್‌ನನ್ನು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದ್ದಾನೆ. ಈ ಮಧ್ಯೆ ಬೈಕ್ ಮೇಲೆ ತೆರಳುತ್ತಿದ್ದಾಗ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾನೆ.

ಏಕೈಕ ಮಗನನ್ನು ಹೊಂದಿದ್ದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಹರೆಯಕ್ಕೆ ಕಾಲಿಡುತ್ತಿದ್ದ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ದುರ್ಘಟನೆ ಇಡೀ ಗ್ರಾಮದ ಜನರಲ್ಲಿ ಬೇಸರ ಮೂಡಿಸಿದೆ.

 


Spread the love

LEAVE A REPLY

Please enter your comment!
Please enter your name here