Heart Attack: ಹೃದಯಾಘಾತಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿ: ಪ್ರಥಮ ಪಿಯುಸಿ ವಿದ್ಯಾರ್ಥಿ ಸಾವು

0
Spread the love

ತುಮಕೂರು: ಇತ್ತೀಚೆಗೆ ಹೃದಯಾಘಾತ ಹೆಚ್ಚಾಗಿ ಸಂಭವಿಸುತ್ತಿದೆ. ಹಿಂದೆಲ್ಲ ತೂಕ ಹೆಚ್ಚಳದಿಂದ, ರಕ್ತದೊತ್ತಡದಿಂದ ಈ ಹೃದಯಾಘಾತ ಸಂಭವಿಸುತ್ತಿತ್ತು. ಆದರೆ ಇತ್ತೀಚೆಗೆ ಚಿಕ್ಕಮಕ್ಕಳಿಗೂ ಹಾರ್ಟ್‌ ಅಟ್ಯಾಕ್‌ ಆಗುತ್ತಿದೆ. ಇತ್ತೀಚೆಗೆ ಕರ್ನಾಟಕದ ಚಾಮರಾಜನಗರಲ್ಲಿ 3ನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿತ್ತು.

Advertisement

ಇದೀಗ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರಿನ ವಿನಾಯಕ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಶಮಂತ್ (17) ಎಂದು ಗುರುತಿಸಲಾಗಿದೆ. ಕಾಲೇಜು ಮುಂದೆ ಸ್ನೇಹಿತರೊಂದಿಗೆ ಮಾತನಾಡುತ್ತಾ ಶಮಂತ್ ನಿಂತಿದ್ದ. ಈ ವೇಳೆ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here