ಶಿವಮೊಗ್ಗ: ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಕೆಎಸ್ಆರ್‌ಟಿಸಿ ಡಿಪೋದ ಭದ್ರತಾ ಸಿಬ್ಬಂದಿ ಮೃತ ಪಟ್ಟಿರುವ ಘಟನೆ ಸಾಗರದಲ್ಲಿ ನಡೆದಿದೆ. ಸಂದೀಪ್ (41) ಮೃತ ದುರ್ಧೈವಿಯಾಗಿದ್ದು, ಬುಧವಾರ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು.
ಇವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಸಂದೀಪ್ರನ್ನು ಸಹೋದ್ಯೋಗಿಗಳು ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಅಷ್ಟರಲ್ಲೇ ಸಂದೀಪ್ ಸಾವನ್ನಪ್ಪಿದ್ದಾರೆ.
ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಸಂದೀಪ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಇರಿಸಲಾಗಿದೆ. ಇನ್ನೂ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಕೆಎಸ್ಆರ್‌ಟಿಸಿ ಸಿಬ್ಬಂದಿ ಸಂದೀಪ್ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.



