ಬೆಂಗಳೂರು: ಬೆಂಗಳೂರು ನಗರದ ರೇಷ್ಮೆ ಸಂಸ್ಥೆ ಮೆಟ್ರೋ ಸ್ಟೇಷನ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ.
Advertisement
ಕೆಆರ್ ಮಾರ್ಕೆಟ್ನಿಂದ ಹಂಚಿಪುರ ಕಾಲೋನಿಗೆ ಹೋಗುತ್ತಿದ್ದ ಬಿಎಂಟಿಸಿ ಬಸ್, ಎದುರಿನಲ್ಲಿ ಸಾಗುತ್ತಿದ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ, ಹಿಂಬದಿ ಕುಳಿತಿದ್ದ ಮಹಿಳೆ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೈಕ್ ಚಾಲಕ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದೆ.
ಘಟನೆದ ನಂತರ ಆಕ್ರೋಶಗೊಂಡ ಸಾರ್ವಜನಿಕರು ಬಸ್ ಡ್ರೈವರ್ ಮತ್ತು ಕಂಡಕ್ಟರ್ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದು, ಆತಂಕದ ಮಧ್ಯೆ ಅವರು ಬಸ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ಇನ್ನೂ ಘಟನೆ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ