HomeKarnataka Newsವಯನಾಡು ಸಂತ್ರಸ್ತರಿಗೆ ಮತ್ತೆ ₹10 ಕೋಟಿ: ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ

ವಯನಾಡು ಸಂತ್ರಸ್ತರಿಗೆ ಮತ್ತೆ ₹10 ಕೋಟಿ: ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ

For Dai;y Updates Join Our whatsapp Group

Spread the love

ಬೆಂಗಳೂರು: ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕ ಸರ್ಕಾರ ₹10 ಕೋಟಿ ಹೆಚ್ಚುವರಿ ಅನುದಾನ ನೀಡಿದ ವಿಚಾರ ಇದೀಗ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಭಾರತೀಯ ಜನತಾ ಪಕ್ಷ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಅತಿಥಿ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ನೀರಗಂಟಿಗಳ ಸಂಬಳ ಸಮಸ್ಯೆಗಳನ್ನು ಪರಿಹರಿಸಲು ವಿಫಲವಾದ ಸರ್ಕಾರ, ಇತರ ರಾಜ್ಯಕ್ಕೆ ಅನುದಾನ ನೀಡುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣವನ್ನು ಬಳಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ವಿಶೇಷವಾಗಿ, ಪ್ರಿಯಾಂಕ ಗಾಂಧಿ ಪ್ರತಿನಿಧಿಸುವ ವಯನಾಡು ಲೋಕಸಭಾ ಕ್ಷೇತ್ರಕ್ಕೆ ಅನುದಾನ ನೀಡಿರುವುದನ್ನು ಪಕ್ಷ ಪ್ರಶ್ನಿಸಿದೆ.

ರಾಜ್ಯದ ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿ, ಅಕಾಲಿಕ ಮಳೆಯಿಂದ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡುವಂತಹ ಒಳರಾಜ್ಯ ಸಮಸ್ಯೆಗಳತ್ತ ಮೊದಲಿಗೆ ಗಮನ ಹರಿಸಬೇಕು. ನಂತರ ಇತರ ರಾಜ್ಯಗಳಿಗೆ ಸಹಾಯ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!