ಮಲೇರಿಯಾ ವಿರೋಧಿ ಮಾಸಾಚರಣೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಹುಯಿಲಗೋಳದ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆಯನ್ನು ಡಾ. ಸುಜಾತ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

Advertisement

ಆರೋಗ್ಯ ನಿರೀಕ್ಷಣಾಧಿಕಾರಿ ಮಂಜುನಾಥ ಜಾಲಿಹಾಳ ಮಾತನಾಡಿ, ಸೊಳ್ಳೆಗಳಿಂದ ಮಲೇರಿಯಾ, ಡೆಂಗಿ, ಚಿಕುನ್‌ಗುನ್ಯಾ, ಮೆದುಳು ಜ್ವರ, ಆನೆಕಾಲು ರೋಗ ಮುಂತಾದ ಹಲವಾರು ಕಾಯಿಲೆಗಳು ಹರಡುತ್ತಿದ್ದು, ಸೊಳ್ಳೆ ನಿಯಂತ್ರಣ ಮಾಡಿದಲ್ಲಿ ಇಂತಹ ಕಾಯಿಲೆಗಳನ್ನು ತಡೆಗಟ್ಟಬಹುದಾಗಿದೆ ಎಂದರು.

ಹುಯಿಲಗೋಳ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ನಾಗರಾಜ ಜೋಷಿ ಮಾತನಾಡಿ, ಮಲೇರಿಯಾ ರೋಗವನ್ನು ಸಂಪೂರ್ಣ ನಿಯಂತ್ರಿಸಲು ಮುಂದಾಗಬೇಕಿದೆ. ಮನೆ ಸುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಬೇಕು. ಸೊಳ್ಳೆಗಳ ಸಂತತಿ ಕಡಿಮೆ ಮಾಡಲು ಪರಿಸರದಲ್ಲಿ ಹಾಗೂ ಮನೆಯ ಸುತ್ತಮುತ್ತಲೂ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಶೀಲಾ ಮಳೇಕರ್, ಸವಿತಾ ಪವಾರ್, ಆಶಾ ಕಾರ್ಯಕರ್ತರಾದ ಪಕೀರವ್ವ ಕಡಿಯವರ್, ರೇಷ್ಮಾ ನದಾಫ್, ಗಂಗವ್ವ ದೇವಶೆಟ್ಟಿ, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಭಾಗವಹಿಸಿದ್ದರು.


Spread the love

LEAVE A REPLY

Please enter your comment!
Please enter your name here