ಮಾತಿನ ಮಲ್ಲಿ, ಹಲವು ರಿಯಾಲಿಟಿ ಶೋಗಳಲ್ಲಿ ನಿರೂಪಣೆ ಮಾಡಿ ಸೈ ಎನಿಸಿಕೊಂಡಿರುವ ಅನುಶ್ರೀ ಅವರು ತಮ್ಮ ಬಹುಕಾಲದ ಗೆಳೆಯನ ಜೊತೆ ಇಂದು ಸಪ್ತಪದಿ ತುಳಿದಿದ್ದಾರೆ.
ಖ್ಯಾತ ನಿರೂಪಕಿ ಅನುಶ್ರೀ ಇಂದು ಕೊಡಗು ಮೂಲದ ರೋಷನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿರುವ ಅನುಶ್ರೀ ಅವರು ತಾವು ಮದುವೆಯಾಗುತ್ತಿರುವ ಮಂಟಪದಲ್ಲಿ ಅಪ್ಪು ಫೋಟೋವನ್ನು ರಾರಾಜಿಸುವಂತೆ ಮಾಡಿದ್ದಾರೆ. ಅಪ್ಪು ಅವರ ಅಪ್ಪಟ ಅಭಿಮಾನಿಯಾಗಿರುವ ಅನುಶ್ರೀ ಮದುವೆ ಮಂಟಪದಲ್ಲಿ ಅಪ್ಪು ಫೋಟೋವೊಂದನ್ನು ಇರಿಸಿ, ಸುತ್ತಲೂ ಹೂವುಗಳಿಂದ ಅಲಂಕಾರ ಮಾಡಿದ್ದಾರೆ.
ಈ ಮೂಲಕ ಅಪ್ಪು ಮೇಲಿನ ಪ್ರೀತಿಯನ್ನು ತೋರ್ಪಡಿಸಿದ್ದಾರೆ. ಈ ಹಿಂದೆಯೂ ಅಪ್ಪು ಬಗ್ಗೆ ನಟಿ ಅನುಶ್ರೀ ಮಾತನಾಡಿದ್ದರು. ಅಪ್ಪು ಸರ್ ನನಗೆ ತುಂಬಾ ಹತ್ತಿರ. ಸಿನಿಮಾ ಇಷ್ಟ ಪಡಲು ಶುರುವಾಗಿದ್ದ ದಿನದಿಂದ ಅವರು ನನಗೆ ತುಂಬಾ ಹತ್ತಿರವಾಗಿದ್ದಾರೆ. ನಾನು ಇಷ್ಟ ಪಡುವ ಏಕೈಕ ನಟ ಅಂದ್ರೆ ಅಪ್ಪು ಸರ್. ಅವರನ್ನು ಭೇಟಿಯಾದ ಮೇಲೆ ಅವರ ಗುಣ, ವ್ಯಕ್ತಿತ್ವಕ್ಕೆ ನಾನು ಅಭಿಮಾನಿಯಾದೆ ಎಂದು ಹಲವು ಭಾರೀ ಭಾವುಕರಾಗಿದ್ದರು.