ಅನ್ವರ್ ಮಾಣಿಪ್ಪಾಡಿಗೆ 150 ಕೋಟಿ ಆಫರ್: ಸಿಬಿಐಗೆ ನೀಡುವಂತೆ ವಿಜಯೇಂದ್ರ ಸವಾಲು!

0
Spread the love

ಬೆಳಗಾವಿ: ನಾನು ಸಿಎಂಗೆ ಸವಾಲ್ ಹಾಕುತ್ತೇನೆ, 150 ಕೋ ರೂ. ಟಿ ಆಮಿಷ ಆರೋಪವನ್ನು ಸಿಬಿಐಗೆ ವಹಿಸಲಿ. ಜತೆಗೆ ಅನ್ವರ್ ಮಾಣಿಪ್ಪಾಡಿ ವರದಿಯ ತನಿಖೆಯನ್ನೂ ಸಿಬಿಐಗೆ ಕೊಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.  ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಅವರು,

Advertisement

ಹಿಂದಿನ ಅಲ್ಪಸಂಖ್ಯಾತರ ಆಯೋಗದ ಹೆಸರು ಹೇಳಿ ನನ್ನ ಮೇಲೆ ಆರೋಪ‌ ಮಾಡಲಾಗಿದೆ. ವಕ್ಫ್ ಆಸ್ತಿ ದುರುಪಯೋಗ ಕುರಿತು ಮಾಣಿಪ್ಪಾಡಿ ವರದಿ ಕೊಟ್ಟಿದ್ದರು. ನಂತರ ಉಪಲೋಕಾಯುಕ್ತ ನ್ಯಾ‌.ಆನಂದ್ ಅವರು ವರದಿ ಕೊಟ್ಟಿದ್ದರು.

2016ರಲ್ಲಿ ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ವರದಿ ನೀಡಿದ್ದರು. ಆದರೆ ಅಂದಿನ ಸಿಎಂ ಉಪಲೋಕಾಯುಕ್ತರ ವರದಿ ಮುಚ್ಚಿ ಹಾಕಿದ್ದರು. ಅಲ್ಪಸಂಖ್ಯಾತರ ಆಯೋಗದ ಹಿಂದಿನ‌ ಅಧ್ಯಕ್ಷರು ಸರ್ಕಾರಕ್ಕೆ ಶಿಫಾರಸು ಸಲ್ಲಿಸಿದ್ದನ್ನು ಸಿದ್ದರಾಮಯ್ಯ ಸಚಿವ ಸಂಪುಟ ತಿರಸ್ಕರಿಸಿತು.

ಸಿಎಂ ಅವರಿಗೆ ಸಿಬಿಐ ಬಗ್ಗೆ ಬಹಳ ವಿಶ್ವಾಸ ಇದೆ. ನಾನು ಸಿಎಂಗೆ ಸವಾಲ್ ಹಾಕುತ್ತೇನೆ, 150 ಕೋ ರೂ. ಟಿ ಆಮಿಷ ಆರೋಪವನ್ನು ಸಿಬಿಐಗೆ ವಹಿಸಲಿ. ಜತೆಗೆ ಅನ್ವರ್ ಮಾಣಿಪ್ಪಾಡಿ ವರದಿಯ ತನಿಖೆಯನ್ನೂ ಸಿಬಿಐಗೆ ಕೊಡಲಿ ಎಂದು ವಿಜಯೇಂದ್ರ ಆಗ್ರಹಿಸಿದರು.


Spread the love

LEAVE A REPLY

Please enter your comment!
Please enter your name here