ಬೆಂಗಳೂರು: ಯಾರೇ ಪಾಕಿಸ್ತಾನ ಪರ ಘೋಷಣೆ ಕೂಗಿದ್ರು ತಪ್ಪು, ಅದು ದೇಶದ್ರೋಹ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಸವ ಜಯಂತಿ ಪ್ರಯುಕ್ತ ನಗರದಲ್ಲಿಂದು ಬಸವಣ್ಣನ ಪ್ರತಿಮೆ ಪುಷ್ಪನಮನ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಪಾಕಿಸ್ತಾನ ಪರ ಘೋಷಣೆ ಕೂಗಿದ್ದರೆ ಅದು ತಪ್ಪು ಮತ್ತು ದೇಶದ್ರೋಹ, ಪಾಕಿಸ್ತಾನ್ ಜಿಂದಾಬಾದ್ ಅಂತ ಕೂಗಿದ ಎಂಬ ಆರೋಪದಲ್ಲಿ ಒಬ್ಬನನ್ನು ಕೊಲ್ಲಲಾಗಿದೆ,
ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು 15 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ, ವರದಿ ಬಂದ ಬಳಿಕ ನಿಜಾಂಶ ಗೊತ್ತಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
ಮಂಗಳೂರಿನ ಕುಡುಪು ಎಂಬಲ್ಲಿ ಕ್ರಿಕೆಟ್ ಪಂದ್ಯದ ವೇಳೆ ಮೊಹಮ್ಮದ್ ಅಶ್ರಫ್ ಎಂಬಾತನ ಮೇಲೆ ಗುಂಪು ಹಲ್ಲೆ ನಡೆಸಲಾಗಿದ್ದು, ಆತ ನಂತರ ಮೃತಪಟ್ಟಿದ್ದ. ಘಟನೆಗೆ ಸಂಬಂಧಿಸಿ 20 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ವ್ಯಕ್ತಿ ಕೇರಳ ಮೂಲದವನಾಗಿದ್ದು, ಕ್ರಿಕೆಟ್ ಪಂದ್ಯದ ವೇಳೆ ‘‘ಪಾಕಿಸ್ತಾನ ಜಿಂದಾಬಾದ್’’ ಎಂದು ಘೋಷಣೆ ಕೂಗಿದ್ದಕ್ಕೆ ಆತನ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.



