ದಾವಣೆಗೆರೆ: ಹಿಂದೂಗಳ ವಿರುದ್ಧ ಯಾರಾದರೂ ಕಮಕ್ ಕಿಮಕ್ ಅಂದರೆ ಗುಂಡು ಹಾರಿಸೋದು ಗ್ಯಾರಂಟಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಹಿಂದೂ ವಿರೋಧಿಗಳಿಗೆ, ಹಿಂದೂಗಳ ವಿರುದ್ಧ ಯಾರಾದರೂ ಕಮಕ್ ಕಿಮಕ್ ಅಂದರೆ ಗುಂಡು ಹಾರಿಸೋದು ಗ್ಯಾರಂಟಿ ಎಂದರು.
Advertisement
ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಸರ್ಕಾರ ಹಾರಾಡಲಿ. ಮುಂದೆ ರಾಜ್ಯದಲ್ಲಿ ಹಿಂದೂಗಳ ರಕ್ಷಣೆ ಮಾಡುವ ಸರ್ಕಾರ ಬಂದೇ ಬರುತ್ತದೆ. ದಾವಣಗೆರೆಯಲ್ಲಿ ಒಂದೇ ಒಂದು ಡಿಜೆಗೂ ಅವಕಾಶ ನೀಡಿಲ್ಲ. ಪೊಲೀಸರದ್ದು ಏನೂ ತಪ್ಪೇ ಇಲ್ಲ.
ಸರ್ಕಾರದ ಮಾತು ಕೇಳಬೇಕಾದ್ದು ಪೊಲೀಸರ ಕರ್ತವ್ಯ. ನಮ್ಮ ಸರ್ಕಾರ ಬಂದಾಗ ಈಗ ಡಿಜೆ ಹಾಕಲು ತೊಂದರೆ ಕೊಟ್ಟವರ ಮನೆ ಮುಂದೆಯೇ ಒಂದು ತಾಸು ಡಿಜೆ ಹಾಕುವಂತೆ ಆದೇಶ ಮಾಡುತ್ತೇನೆ ಎಂದು ಕಾಂಗ್ರೆಸ್ಸಿಗರಿಗೆ ಯತ್ನಾಳ ಎಚ್ಚರಿಕೆಯ ಸಂದೇಶ ರವಾನಿಸಿದರು.