ನವದೆಹಲಿ: ಭಾರೀ ಬೆಂಕಿ ಅವಘಡ ಸಂಭವಿಸಿ ಅನಾಹುತದಿಂದ ತಪ್ಪಿಸಿಕೊಳ್ಳಲು ಅಲ್ಲಿನ ಜನತೆ ಮಹಡಿಯಿಂದ ಜಿಗಿದಿರುವ ಘಟನೆ ದೆಹಲಿಯ ದ್ವಾರಕಾ ಸೆಕ್ಟರ್ 13ರ ಶಾಬಾದ್ ಅಪಾರ್ಟ್‌ಮೆಂಟ್‌ನಲ್ಲಿ ಜರುಗಿದೆ.
Advertisement
ಎಂಆರ್‌ವಿ ಶಾಲೆಯ ಬಳಿಯ ಸೆಕ್ಟರ್ -13ರ ಶಾಬಾದ್ ಅಪಾರ್ಟ್‌ಮೆಂಟ್‌ನ ಏಳನೇ ಮಹಡಿಯಲ್ಲಿರುವ ಫ್ಲಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಗಾಯಾಳುಗಳ ವಿವರಗಳು ಇನ್ನೂ ತಿಳಿದುಬಂದಿಲ್ಲ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಅಪಾಯದಿಂದ ಪಾರಾಗುವ ಸಲುವಾಗಿ ಮೂವರು ಮಹಡಿಯಿಂದ ಹಾರಿದ್ದು, ಸ್ಥಿತಿ ಗಂಭೀರವಾಗಿದೆ.
ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡದ ಬಗ್ಗೆ ಬೆಳಗ್ಗೆ 10 ಗಂಟೆಯ ಸುಮಾರಿಗೆ ಕರೆ ಬಂತು. ತಕ್ಷಣವೇ ಎಂಟು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದೆ.