HomeAgricultureಬೆಳೆ ಹಾನಿ ಪರಿಹಾರ ನೀಡಲು ಮನವಿ

ಬೆಳೆ ಹಾನಿ ಪರಿಹಾರ ನೀಡಲು ಮನವಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ತಾಲೂಕಿನಲ್ಲಿ ಅಕ್ಟೋಬರ್ ತಿಂಗಳಲ್ಲಿ ಸುರಿದ ಅತಿಯಾದ ಮಳೆಗೆ ಬೆಳೆಗಳು ಹಾಳಾಗಿದ್ದರಿಂದ ಸರ್ಕಾರ ಫಸಲ್ ಭಿಮಾ ಯೋಜನೆ ಅಡಿಯಲ್ಲಿ ರೈತರಿಗೆ ಮಧ್ಯಂತರ ಪರಿಹಾರವಾಗಿ ಶೆ. 25ರಷ್ಟು ಹಣವನ್ನು ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ರಾಜ್ಯ ರೈತ ಸಂಘದ ವತಿಯಿಂದ ತಹಸೀಲ್ದಾರ್ ವಾಸುದೇವ ಸ್ವಾಮಿ ಅವರಿಗೆ ರೈತರು ಮನವಿ ಸಲ್ಲಿಸಿದರು.

ತಾಲೂಕು ಅಧ್ಯಕ್ಷ ಚಂದ್ರು ಕಳ್ಳಿಹಾಳ ಮಾತನಾಡಿ, ಲಕ್ಷ್ಮೇಶ್ವರ ತಾಲೂಕಿನಲ್ಲಿ ಇತ್ತೀಚೆಗೆ ಸುರಿದ ಅತಿಯಾದ ಮಳೆಗೆ ಮುಂಗಾರು ಹಂಗಾಮಿನ ಬೆಳೆಗಳು ಕೊಳೆತು ಹೋಗಿವೆ. ಗೋವಿನ ಜೋಳ, ಬಿಟಿ ಹತ್ತಿ, ಈರುಳ್ಳಿ, ಮೆಣಸಿನಕಾಯಿ, ಶೇಂಗಾ ಬೆಳೆಗಳು ನಾಶವಾಗಿವೆ. ಇದರಿಂದ ರೈತರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಅದ್ದರಿಂದ ಸರ್ಕಾರ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ರೈತರು ಬೆಳೆ ವಿಮೆ ಹಣವನ್ನು ಬಿಡುಗಡೆ ಮಾಡಿ ರೈತರು ಸಂಕಷ್ಟ ದೂರ ಮಾಡಬೇಕು ಎಂದು ಆಗ್ರಹಿಸಿದರು.

ತಹಸೀಲ್ದಾರ್ ವಾಸುದೇವ ಸ್ವಾಮಿ ಮನವಿ ಸ್ವೀಕರಿಸಿ ಮಾತನಾಡಿ, ಸರ್ಕಾರಕ್ಕೆ ನಿಮ್ಮ ಅಹವಾಲು ಕಳಿಸಿಕೊಡುತ್ತೇವೆ. ಸರ್ಕಾರದ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಹನಮಂತ ಹುಚ್ಚಣ್ಣವರ, ರಮೇಶ ದೊಡ್ಡಮನಿ, ಚಂದ್ರು ಶಿರನಹಳ್ಳಿ, ಶಂಬಣ್ಣ ಬಳಿಗಾರ, ಬಸವರಾಜ ಮೂಲಿಮನಿ, ರವಿ ಲಮಾಣಿ, ದೇವಪ್ಪ ರಾಹುಲ್, ದೇವಪ್ಪ ದಾಸಣ್ಣವರ ಸೇರಿ ಹಲವರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img