HomeGadag Newsಮಾಸ್ಟರ್ ಪ್ಲಾನ್ ಜಾರಿಗೊಳಿಸಲು ಮನವಿ

ಮಾಸ್ಟರ್ ಪ್ಲಾನ್ ಜಾರಿಗೊಳಿಸಲು ಮನವಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಗದಗ-ಬೆಟಗೇರಿ ಅವಳಿ ನಗರದಲ್ಲಿ ಮಾಸ್ಟರ್ ಪ್ಲಾನ್ ಜಾರಿಗೊಳಿಸಿ ಪ್ರಮುಖ ರಸ್ತೆಗಳ ಅಗಲೀಕರಣ, ರಸ್ತೆಗಳ ನವೀಕರಣ, ಪಾದಚಾರಿ ರಸ್ತೆ ನಿರ್ಮಾಣ ಮಾಡುವ ಮತ್ತು ಮೂಲಭೂತ ಸೌಕರ್ಯ ಒದಗಿಸುವಂತೆ ಸ್ನೇಹ ಬಳಗದ ಜಿಲ್ಲಾಧ್ಯಕ್ಷ ಬಾಬು ಶಿದ್ಲಿಂಗ ಗದಗ-ಬೆಟಗೇರಿ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ಮಾತನಾಡಿದ ಅವರು, ಗದಗ ಜಿಲ್ಲೆಯಾದ ನಂತರ ಗದಗ-ಬೆಟಗೇರಿಯ ಜನಸಂಖ್ಯೆ ಹೆಚ್ಚುತ್ತಾ ಇದೆ. ಆದರೆ ಗದಗ-ಬೆಟಗೇರಿಯ ಪ್ರಮುಖ ರಸ್ತೆಗಳು ಅಗಲೀಕರಣವಾಗದೇ, ಪಾದಚಾರಿ ರಸ್ತೆ ಇಲ್ಲದೆ ರಸ್ತೆಯ ಬದಿಯಲ್ಲಿರುವ ವ್ಯಾಪಾರಿಗಳಿಗೆ ಹಾಗೂ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಗದಗ ಜಿಲ್ಲೆಯಾಗಿ 27 ವರ್ಷ ಕಳೆದರೂ ಗದಗ-ಬೆಟಗೇರಿ ಅವಳಿ ನಗರವನ್ನು ಯಾವುದೇ ಅಧಿಕಾರಿಗಳು ಮಾಸ್ಟರ್ ಪ್ಲಾನ್ ಮಾದರಿಯನ್ನು ಜಾರಿಗೆಗೊಳಿಸಿ ಅಭಿವೃದ್ಧಿಪಡಿಸಲು ಮುಂದಾಗಿಲ್ಲ. ಅವಳಿ ನಗರವನ್ನು ಅಭಿವೃದ್ಧಿಪಡಿಸಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾರ್ಯಕ್ಕೆ ಮುಂದಾಗಬೇಕೆಂದು ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ದೀಪಕ ಕಲಾಲ, ಪ್ರವೀಣ ಜಿತೂರಿ ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!