ಬೆಂಗಳೂರು:- ಸಾಹಸಸಿಂಹ ವಿಷ್ಣುವರ್ಧನ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಅಳಿಯ ಅನಿರುದ್ಧ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ನಟ ವಿಷ್ಣುವರ್ಧನ್ ಅವರು ನಿಧನರಾಗಿ 15 ವರ್ಷಗಳು ಕಳೆದಿವೆ. ಜನರಿಗೆ ಅವರ ಮೇಲಿನ ಅಭಿಮಾನ ಕಿಂಚಿತ್ತೂ ಕಡಿಮೆ ಆಗಿಲ್ಲ. ಈಗ ವಿಷ್ಣುವರ್ಧನ್ ಅಳಿಯ, ನಟ ಅನಿರುದ್ಧ್ ಜತ್ಕರ್ ಅವರು ಕರ್ನಾಟಕ ಸರ್ಕಾರಕ್ಕೆ ಒಂದು ಮನವಿ ಸಲ್ಲಿಸಿದ್ದಾರೆ. ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಚಲನಚಿತ್ರ ರಂಗ, ಕಲಾರಂಗಕ್ಕೆ ವಿಷ್ಣು ಅವರ ಕೊಡುಗೆ ಅಪಾರ. ಇನ್ನೂ ಅವರಿಗೆ ಕೇಂದ್ರದಿಂದಲೂ ಪದ್ಮಶ್ರೀ ಪ್ರಶಸ್ತಿ ಕೊಟ್ಟಿಲ್ಲ. ಕರ್ನಾಟಕ ಸರ್ಕಾರದಿಂದಲೂ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿಲ್ಲ. ಈ ವರ್ಷದ ಸೆಪ್ಟೆಂಬರ್ 18ರಂದು ಅವರ 75ನೇ ಜನ್ಮವಾರ್ಷಿಕೋತ್ಸವವಿದೆ. ಹೀಗಾಗಿ, ಅವರ 75ನೇ ವರ್ಷದ ವಿಶೇಷ ಸಂದರ್ಭದಲ್ಲಾದರೂ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡುವಂತೆ ಅನಿರುದ್ಧ್ ಮನವಿ ಮಾಡಿದ್ದಾರೆ.



