ಬೇಡಿಕೆ ಈಡೇರಿಸುವಂತೆ ಹಿರಿಯ ನಾಗರಿಕರ ಮನವಿ

0
hiriya nagarika
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಹಿರಿಯ ನಾಗರಿಕರು ತಮ್ಮ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸೋಮವಾರ ಪಟ್ಟಣದ ತಹಸೀಲ್ದಾರ ಕಚೇರಿಯ ಮುಂದೆ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಿ, ತಹಸೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Advertisement

ಮನವಿ ಪತ್ರದಲ್ಲಿ, ಸಂಘದಿಂದ ನಿವೃತ್ತ ನೌಕರರು ಹಾಗೂ ಹಿರಿಯ ನಾಗರಿಕರ ಸಮಸ್ಯೆ ಮತ್ತು ಬೇಡಿಕೆಗಳ ಕುರಿತು ಹಲವಾರು ವರ್ಷಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಾ ಬರಲಾಗಿದೆ. ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಯಲ್ಲಿ ಹಿರಿಯರ ವಿಭಾಗ ಆರಂಭಿಸುವುದು, ಪ್ರತ್ಯೇಕ ಸಮಿತಿ ಮತ್ತು ದೌರ್ಜನ್ಯ ತಡೆ ಕಾನೂನು ರಚನೆ, ಪುರುಷ ಹಿರಿಯ ನಾಗರಿಕರಿಗೆ ಉಚಿತ ಬಸ್ ಪ್ರಯಾಣ, ಭವನ ಮತ್ತು ಸಂಘ-ಸಂಸ್ಥೆ ನಿರ್ಮಾಣಕ್ಕೆ ಅನುದಾನ ಸೇರಿ ಹಿರಿಯ ನಾಗರಿಕರಿಗೆ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ಕಲ್ಪಿಸಬೇಕೆಂಬ ಬೇಡಿಕೆ ಈಡೇರಿಕೆಗಾಗಿ ಜನವರಿ ತಿಂಗಳಲ್ಲಿ ಹುಬ್ಬಳ್ಳಿಯಲ್ಲಿ ಹಿರಿಯ ನಾಗರಿಕರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಇನ್ನೂ ಸರಕಾರ ಯಾವುದೇ ಸ್ಪಂದನೆ ನೀಡದಿದ್ದಲ್ಲಿ ಬರುವ ಪಾರ್ಲಿಮೆಂಟ್ ಚುನಾವಣೆಯಲ್ಲಿ ರಾಜ್ಯದ 80 ಲಕ್ಷ ಹಿರಿಯ ನಾಗರಿಕರು ನೋಟಾ ಓಟ್ ಮಾಡಲು ಯೋಚಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ವೇಳೆ ಹಿರಿಯ ನಾಗರಿಕರ ಸಂಘದ ಅಧ್ಯಕ್ಷರಾದ ಸಿ.ಆರ್. ಲಕ್ಕುಂಡಿಮಠ, ಎನ್.ವಿ ಹೇಮಗಿರಿಮಠ, ಎಂ.ಕೆ ಕಳ್ಳಿಮಠ, ಎಸ್.ಪಿ ಸಭಾವಡೆಯರಮಠ, ಚನ್ನಪ್ಪ ಕೋಲಕಾರ, ಚಂಬಣ್ಣ ಬಾಳಿಕಾಯಿ, ಸುರೇಶ ರಾಚನಾಯ್ಕರ, ನೀಲಪ್ಪ ಕರ್ಜೆಕಣ್ಣವರ, ಎಂ.ಎಚ್. ಖುದ್ದುಬಾಯಿ, ಭರಮಪ್ಪ ಕೊಡ್ಲಿ, ಗೂಳಪ್ಪ ಮೆಕ್ಕಿ, ಚನ್ನಬಸಪ್ಪ ಅಸುಂಡಿ ಸೇರಿ ಹಲವರಿದ್ದರು. ತಹಸೀಲ್ದಾರ ವಾಸುದೇವ ಸ್ವಾಮಿ ಮನವಿ ಸ್ವೀಕರಿಸಿದರು.


Spread the love

LEAVE A REPLY

Please enter your comment!
Please enter your name here