ಕಾರ್ಮಿಕರ ಕುಂದು-ಕೊರತೆಗಳನ್ನು ನಿವಾರಿಸಲು ಮನವಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಕಾರ್ಮಿಕರ ಕುಂದು-ಕೊರತೆಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಮಿಕ ಘಟಕದ ಗದಗ ಜಿಲ್ಲಾಧ್ಯಕ್ಷ ತೌಸಿಫ ಢಾಲಾಯತ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

Advertisement

ಈ ಸಂದರ್ಭದಲ್ಲಿ ತೌಸಿಫ ಢಾಲಾಯತ ಮಾತನಾಡಿ, ಕಟ್ಟಡ ಕಾರ್ಮಿಕರ ಲೇಬರ್ ಕಾರ್ಡ್ಗಳ ನವೀಕರಣ ಮೊದಲು ಮೂರು ವರ್ಷಕ್ಕೊಮ್ಮೆ ಇತ್ತು. ಈಗ ಪ್ರತಿ ವರ್ಷವೂ ನವೀಕರಣ ಮಾಡುತ್ತಿರುವುದರಿಂದ ಕಟ್ಟಡ ಕಾರ್ಮಿಕರಿಗೆ ತೊಂದರೆಯಾಗುತ್ತಿದೆ. ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸ್ಕಾಲರ್‌ಶಿಪ್ ಕಳೆದ ಎರಡು ವರ್ಷಗಳಿಂದ ಸರಿಯಾಗಿ ಬರುತ್ತಿಲ್ಲ. ಇದರಿಂದ ಮಕ್ಕಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ಕಾರ್ಮಿಕ ಇಲಾಖೆಯಿಂದ ಆರೋಗ್ಯ ತಪಾಸಣೆ ಶಿಬಿರವನ್ನು ಮಾಡುತ್ತಿದ್ದು, ಇದು ಸಹ ಕಾರ್ಮಿಕರಿಗೆ ಪ್ರಯೋಜನವಾಗುತ್ತಿಲ್ಲ. ಇದನ್ನು ತಕ್ಷಣ ಸ್ಥಗಿತಗೊಳಿಸಿ ಇದೇ ಹಣದಲ್ಲಿ ಕಾರ್ಮಿಕರ ಮಕ್ಕಳಿಗೆ ಸ್ಕಾಲರ್‌ಶಿಪ್ ನೀಡುವಂತೆ ವಿನಂತಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗೌರವಾಧ್ಯಕ್ಷ ನಿಂಗನಗೌಡ ಮಾಲಿಪಾಟೀಲ, ಜಿಲ್ಲಾ ಉಪಾಧ್ಯಕ್ಷ ವಿನಾಯಕ ಬದಿ, ಮುಳಗುಂದ ನಗರ ಘಟಕದ ಅಧ್ಯಕ್ಷ ಹುಸೇನ ಅಕ್ಕಿ, ಕುಮಾರ ರೇವಣ್ಣವರ, ದಾವಲಸಾಬ ತಹಸೀಲ್ದಾರ, ಇರ್ಫಾನ ತಾಳಿಕೋಟಿ, ನಿಯಾಜ್‌ಶೇಖ, ಯಲ್ಲಪ್ಪ ಭೋವಿ, ರಾಹುಲ ತೇರದಾಳ, ನಜೀರ ಎಲಿಗಾರ, ದಾದಾಪೀರ ನದಾಫ್, ಸುಲೇಮಾನ ಮಂಜಲಾಪೂರ, ಶಂಭು, ದುರಗಪ್ಪ ಭಜಂತ್ರಿ, ಶಬ್ಬೀರ ಚೌಧರಿ ಸೇರಿದಂತೆ ಕರವೇ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here