ಬೇಡಿಕೆಗಳ ಈಡೇರಿಕೆಗೆ ಮುಖ್ಯಾಧಿಕಾರಿಗಳಿಗೆ ಮನವಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಮುಂಡರಗಿ ಪಟ್ಟಣದ ಅಭಿವೃದ್ಧಿಯ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮುಂಡರಗಿ ಪುರಸಭೆ ಮುಖ್ಯಾಧಿಕಾರಿಗಳಿಗೆ ಕನ್ನಡ ಜನಾಭಿವೃದ್ಧಿ ವೇದಿಕೆ ಗದಗ ಜಿಲ್ಲಾ ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು.

Advertisement

ಮನವಿ ಸಲ್ಲಿಸಿ ಘಟಕದ ಜಿಲ್ಲಾಧ್ಯಕ್ಷ ಗಣೇಶ ಹಾತಲಗೇರಿ ಮಾತನಾಡಿ, ಮುಂಡರಗಿ ನಗರದಲ್ಲಿ ಅಳವಡಿಸಿರುವ ಹೈಮಾಸ್ಟ್ ದೀಪಗಳು ದುರಸ್ತಿಯಲ್ಲಿದ್ದು, ಅವುಗಳನ್ನು ಶೀಘ್ರವೇ ಸರಿಪಡಿಸಬೇಕು. ರಸ್ತೆ ಮಧ್ಯ ಹಾಕಿರುವ ರಸ್ತೆ ಡಿವೈಡರ್‌ಗೆ ಬಣ್ಣ ಹಚ್ಚುವಂತೆ ಮನವಿ ಸಲ್ಲಿಸಿದರು.

ಪುರಸಭೆ ಮುಖ್ಯಾಧಿಕಾರಿ ಶಂಕರ ಹುಲ್ಲಮ್ಮನವರ ಮನವಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ತಾಲೂಕಾಧ್ಯಕ್ಷ ಸುಭಾಷ ಕಿತ್ತೂರ, ಗೌರವಾಧ್ಯಕ್ಷ ಉಮೇಶ ಹಿರೇಮಠ, ಕಾರ್ಯದರ್ಶಿ ಸಂತೋಷ ಹಡಪದ, ಪುರಸಭೆ ಸದಸ್ಯ ಸಂತೋಷ ಹಿರೇಮನಿ ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here