ಅನುದಾನ ಒದಗಿಸಲು ಸಚಿವರಿಗೆ ಮನವಿ

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷೇಶ್ವರ: ಪಟ್ಟಣದಲ್ಲಿನ ಹಾಗೂ ಕ್ಷೇತ್ರದ ವಿವಿಧ ಅಬಿವೃದ್ಧಿ ಕಾರ್ಯಗಳಿಗೆ ಅನುದಾನ ಒದಗಿಸುವಂತೆ ಬೆಂಗಳೂರಿನಲ್ಲಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಇಲಾಖೆ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಅವರನ್ನು ಶಾಸಕ ಡಾ. ಚಂದ್ರು ಲಮಾಣಿಯವರು ಇತ್ತೀಚೆಗೆ ಭೇಟಿಯಾಗಿ ಮನವಿ ಮಾಡಿದರು.

Advertisement

ಪಟ್ಟಣದ ಭಾನು ಮಾರ್ಕೆಟ್‌ನಿಂದ ದರ್ಗಾದವರೆಗೆ ಹೋಗುವ ರಸ್ತೆಯ ನಿರ್ಮಾಣದ ಅವಶ್ಯಕತೆಯ ಶಾಸಕರು ಸಚಿವರೊಂದಿಗೆ ಚರ್ಚಿಸಿದರು. ಜೊತೆಗೆ ವಿವಿಧ ಕಾಮಗಾರಿಗಳ ಕುರಿತು ಹಾಗೂ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವ ವಸತಿ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಮನೆಗಳನ್ನು ಮಂಜೂರು ಮಾಡುವಂತೆ ವಿನಂತಿಸಿದರು.

ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಆದಷ್ಟು ಶೀಘ್ರ ಮನವಿಗಳಿಗೆ ಅಧ್ಯತೆ ನೀಡಿ ಅನುದಾನ ಮಂಜೂರಿ ಮಾಡುವದಲ್ಲದೆ, ವಸತಿ ರಹಿತರಿಗೆ ವಸತಿ ಕಲ್ಪಿಸುವ ಯೋಜನೆಯನ್ನು ಸಹ ಕ್ಷೇತ್ರದಲ್ಲಿ ಮಂಜೂರಿ ಮಾಡುವ ಕುರಿತು ಸಹಮತ ವ್ಯಕ್ತಪಡಿಸಿದರು.


Spread the love

LEAVE A REPLY

Please enter your comment!
Please enter your name here