ವಿಜಯಸಾಕ್ಷಿ ಸುದ್ದಿ, ಗದಗ: ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗುತ್ತಿರುವದರಿಂದ ಅವುಗಳ ನಿಯಂತ್ರಣಕ್ಕೆ ಕ್ರಮ ಕೈಗೊಂಡು ಬೇರೆಡೆ ಸ್ಥಳಾಂತರಿಸಬೇಕೆಂದು ಜುಮ್ಮಾ ಮಸೀದಿ ಮರ್ಕಝ ಕಮಿಟಿ ವತಿಯಿಂದ ಗದಗ-ಬೆಟಗೇರಿ ನಗರಸಭೆಯ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಜುಮ್ಮಾ ಮಸೀದಿ ಹತ್ತಿರ ಹಳೆ ಸರಾಫ್ ಬಜಾರ್ ರಸ್ತೆಯಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅಲ್ಲಿ ಸಂಚರಿಸುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಸಾರ್ವಜನಿಕರು ರಸ್ತೆಯಲ್ಲಿ ಬೀದಿ ನಾಯಿಗಳ ದಾಳಿಯಿಂದ ಹೆದರಿ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ವೃದ್ಧರು, ಮಕ್ಕಳು, ಮಹಿಳೆಯರು ಬೀದಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡಿರುವ ಘಟನೆಗಳೂ ನಡೆದಿವೆ.
ಅಲ್ಲದೆ, ಕಸದ ತೊಟ್ಟಿಯಿಂದ ಕಸವನ್ನು ಚೆಲ್ಲಾಪಿಲ್ಲಿಯಾಗಿ ಹರಡಿ ನಮಾಜು ಮಾಡುವ ಸ್ಥಳದಲ್ಲಿ ಗಲೀಜು ಮಾಡುತ್ತಿವೆ. ಹೀಗಾಗಿ ನಮಾಜು ಮಾಡುವ ಪವಿತ್ರ ಸ್ಥಳವನ್ನು ಅಪವಿತ್ರ ಮಾಡುತ್ತಿದ್ದು, ಕೂಡಲೇ ಬೀದಿ ನಾಯಿಗಳನ್ನು ಸ್ಥಳಾಂತರಿಸಬೇಕೆಂದು ಮನವಿ ಸಲ್ಲಿಸಿದರು.
ಈ ಸಂರ್ಭದಲ್ಲಿ ನಗರಸಭೆಯ ಸದಸ್ಯರಾದ ಬರ್ಕತ ಅಲಿ ಮುಲ್ಲಾ, ಅನಿಲ್ ಅಬ್ಬಿಗೇರಿ, ಕಮಿಟಿಯ ಪದಾಧಿಕಾರಿಗಳಾದ ಹಾಜಿ ಇಸ್ಮಾಯಿಲ್ ಹಾರ್ಲಾಪುರ, ಸಯ್ಯದ್ ಖಾಜಿಯವರು ಉಪಸ್ಥಿತರಿದ್ದರು.