ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಆರೋಪಿ ದರ್ಶನ್‌ಗೆ ಕಾನೂನು ಸಮರದಲ್ಲಿ ಈವರೆಗೆ ಎಲ್ಲಾ ಅಂದುಕೊಂಡಂತೆ ಆಗಿದೆ. ಆದ್ರೆ ದರ್ಶನ್ ಸೇರಿದಂತೆ 7 ಮಂದಿ ಆರೋಪಿಗಳಿಗೆ ರೆಗ್ಯುಲರ್ ಜಾಮೀನು ಸಿಕ್ಕಿರೋದನ್ನ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ತನಿಖಾಧಿಕಾರಿಗಳು ಮುಂದಾಗಿದ್ದಾರೆ. ಹೌದು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ.
Advertisement
ಕೋರ್ಟ್ ಗೆ ಹೋಗಲು ತಯಾರಿ ನಡೆದಿದ್ದು ಶೀಘ್ರವೇ ಅರ್ಜಿ ಸಲ್ಲಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ತಿಳಿಸಿದ್ದಾರೆ. ಸುಮಾರು ಎರಡು ತಿಂಗಳ ಅವಧಿಯಲ್ಲಿ ಎರಡೆರಡು ಜಾಮೀನುಗಳನ್ನು ಪಡೆದು ನಿರಾಳರಾಗಿರುವ ನಟ ದರ್ಶನ್‌ಗೆ ಮುಂದಿನ ದಿನಗಳಲ್ಲಿ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.