ಬಿಗ್ ಬಾಸ್ ರಿಯಾಲಿಟಿ ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಭೀಗ ಹಾಕುವ ಮೂಲಕ ಶಾಕ್ ನೀಡಲಾಗಿತ್ತು. ಬಿಗ್ ಹಾಕುತ್ತಿದ್ದಂತೆ ಶೋ ಅನ್ನು ಬಂದ್ ಮಾಡಲಾಗಿದ್ದು, ಸ್ಪರ್ಧಿಗಳನ್ನೆಲ್ಲ ರೆಸಾರ್ಟ್ಗೆ ಸ್ಥಳಾಂತರ ಮಾಡಲಾಗಿದೆ. ಇದೀಗ ಜಾಲಿವುಡ್ ಸ್ಟುಡಿಯೋಸ್ನ ಮಾತೃ ಸಂಸ್ಥೆ ವೇಲ್ಸ್ ಸ್ಟುಡಿಯೋಸ್ನವರು ತಾತ್ಕಾಲಿಕ ಅನುಮತಿ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿಗಳಿಗೆ ವೇಲ್ಸ್ ಸ್ಟುಡಿಯೋಸ್ನವರು ಪತ್ರ ಬರೆದಿದ್ದು, ನಾವು ಪರವಾನಗಿ ಪಡೆದು ಸ್ಟುಡಿಯೋ ನಡೆಸುತ್ತಿದ್ದೇವೆ. ನಮ್ಮ ಸ್ಟುಡಿಯೋನಲ್ಲಿನ ಎಲ್ಲ ಚಟುವಟಿಕೆಗಳಿಗೆ ಪರವಾನಗಿ ಇದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಇಲಾಖೆಯ ಕೆಲವು ನಿಯಮಗಳನ್ನು ನಾವು ಸರಿಯಾಗಿ ಪಾಲಿಸಿಲ್ಲ, ಈ ಬಗ್ಗೆ ನಾವು ವಿಷಾಧ ವ್ಯಕ್ತಪಡಿಸುತ್ತೇವೆ. ಇನ್ನು ಮುಂದೆ ನಾವು ಕೆಎಸ್ಪಿಬಿಯ ಎಲ್ಲ ನಿಯಮಗಳನ್ನು ಪಾಲಿಸುತ್ತೇವೆ, ಅದಕ್ಕೆ ಸಂಬಂಧಿಸಿರುವ ದಾಖಲೆಗಳನ್ನು ನಾವು ಕೆಎಸ್ಪಿಬಿಗೆ ಸಲ್ಲಿಕೆ ಮಾಡುತ್ತೇವೆ. ನಮಗೆ 15 ದಿನಗಳ ಕಾಲಾವಕಾಶ ನೀಡಿ ಅಷ್ಟರಲ್ಲಿ ಎಲ್ಲವನ್ನು ಸರಿಪಡಿಸುತ್ತೇವೆ, ಸದ್ಯಕ್ಕೆ ನಮಗೆ ತಾತ್ಕಾಲಿಕ ಅನುಮತಿಯನ್ನು ನೀಡಿ, ಆ ನಂತರ ಪರಿಶೀಲನೆ ನಡೆಸಿ ಅನುಮತಿಯನ್ನು ನವೀಕರಣಗೊಳಿಸಿ ಎಂದು ಪತ್ರದಲ್ಲಿ ವೇಲ್ಸ್ ಸ್ಟುಡಿಯೋ ಮನವಿ ಮಾಡಿದೆ.
ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಜಾಲಿವುಡ್ ಸ್ಟುಡಿಯೋಸ್ನವರು ಪಾಲಿಸಿಲ್ಲವೆಂದು ಸ್ಥಳೀಯ ಆಡಳಿತಾಧಿಕಾರಿಗಳು ನಿನ್ನೆ ಜಾಲಿವುಡ್ ಸ್ಟುಡಿಯೋಗೆ ಬೀಗ ಹಾಕಿದ್ದಾರೆ. ಜಾಲಿವುಡ್ ಒಳಗಿದ್ದ ಬಿಗ್ಬಾಸ್ ಕನ್ನಡ ಶೋ ಅನ್ನು ಸಹ ನಿಲ್ಲಿಸಲಾಗಿದ್ದು, ಸ್ಪರ್ಧಿಗಳನ್ನೆಲ್ಲ ಸ್ಥಳಾಂತರ ಮಾಡಿಸಲಾಗಿದೆ. ಈಗ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದ್ದು, ಜಿಲ್ಲಾಧಿಕಾರಿಗಳು ಯಾವ ನಿರ್ಣಯವನ್ನು ಕೈಗೊಳ್ಳಲಿದ್ದಾರೆ ಎಂಬ ಕುತೂಹಲ ಮೂಡಿದೆ.