ವಿಜಯಸಾಕ್ಷಿ ಸುದ್ದಿ, ಗದಗ: ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವಾಯ್. ವಿಜಯೇಂದ್ರ ಅವರ ಸೂಚನೆಯಂತೆ ಬಿಜೆಪಿ ಗದಗ ಜಿಲ್ಲೆಯ ಗದಗ ವಿಧಾನಸಭಾ ಕ್ಷೇತ್ರದ ನಗರ ಮಂಡಲ ಪ್ರಧಾನ ಕಾರ್ಯದರ್ಶಿಗಳನ್ನಾಗಿ ಶಂಕರ ಕಾಕಿ ಹಾಗೂ ಸುರೇಶ ಚಿತ್ತರಗಿ ಅವರನ್ನು ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಗದಗ ನಗರ ಮಂಡಲ ಅಧ್ಯಕ್ಷ ಸುರೇಶ ಮರಳಪ್ಪನವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement