ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರ ನೇಮಕ

0
Appointment of College Development Committee Members
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಬೆಟಗೇರಿಯ ನಾಗಸಮುದ್ರ ರಸ್ತೆಯಲ್ಲಿರುವ ಸರಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾಗಿ ಗದಗ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಸೇರಿದಂತೆ 12 ಜನರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

Advertisement

ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿರುವ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರ ಶಿಫಾರಸ್ಸಿನ ಮೇಲೆ 12 ಜನರನ್ನು ಸದಸ್ಯರನ್ನಾಗಿ ನೇಮಕ ಮಾಡಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶಿಸಿದ್ದಾರೆ.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾಗಿ ಆರ್.ಎಚ್. ಏಕಬೋಟೆ, ಶಂಕರಸಿಂಗ್ ರಜಪೂತ, ಮಲ್ಲಿಕಾರ್ಜುನ ಐಲಿ, ಹೊನ್ನಪ್ಪ ಸಾಕಿ, ಡಾ. ದಿವಾಕರ ಪರಕಾಳೆ, ಶಿವಕುಮಾರ ಬೆಟಗೇರಿ, ಅಂಬರೀಷ್ ಚಾಗಿ, ವಿಜಯ ಕಬಾಡಿ, ಮಹಮ್ಮದ್ ಶಾಲಗಾರ, ಬಸವರಾಜ ಕಡೇಮನಿ, ಅಶೋಕ ಮಂದಾಲಿ ಹಾಗೂ ಕುಸುಮಾ ಬೆಳಗಟ್ಟಿ ಅವರು ಸರಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾಗಿ ನೇಮಕವಾಗಿದ್ದಾರೆ.


Spread the love

LEAVE A REPLY

Please enter your comment!
Please enter your name here