ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ ಇವರ ಆದೇಶದ ಮೇರೆಗೆ ಗದಗ ಜಿಲ್ಲೆಯ ಅಧ್ಯಕ್ಷರಾದ ಶಂಕರಗೌಡ ಎಂ.ಜಯನಗೌಡ್ರ ಇವರು ಕಳಸಾಪೂರ ಗ್ರಾಮದ ಮಂಜುನಾಥ ಮಲ್ಲಪ್ಪ ವಡ್ಡರ ಇವರನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗದಗ ತಾಲೂಕಾಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಆದೇಶ ಪತ್ರ ನೀಡಿದರು.
ಸದರಿಯವರು ರೈತ ಸಂಘದ ಧ್ಯೇಯೋದ್ದೇಶಗಳನ್ನು ಅಳವಡಿಸಿಕೊಂಡು ರೈತರ ಮತ್ತು ದೀನ ದಲಿತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಾ, ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಮೂಲಕ ಪೂರ್ಣ ಪ್ರಮಾಣದಲ್ಲಿ ತಾಲೂಕಾ ಸಮಿತಿಯನ್ನು ಆಯ್ಕೆ ಮಾಡಿಕೊಳ್ಳುವಂತೆ ಆದೇಶ ಮಾಡಲಾಗಿದೆ.
ಈ ಸಂದರ್ಭದಲ್ಲಿ ಬಸವಣ್ಣೆಯ್ಯ ಹಿರೇಮಠ, ರವೀಂದ್ರ ಮೇಗುರ ಉಪಸ್ಥಿತರಿದ್ದರು.



