ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘ ಮತ್ತು ನೌಕರರ ಸಂಘಟನೆಗಳ ಸಹಯೋಗದಲ್ಲಿ ಗದಗನಲ್ಲಿ ನಡೆದ ನೂತನ ಜಿಲ್ಲಾಧ್ಯಕ್ಷರುಗಳು ಹಾಗೂ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ನೌಕರ ಜನಸ್ನೇಹಿ ಕಾರ್ಯಾಗಾರದಲ್ಲಿ ಲಕ್ಷ್ಮೇಶ್ವರ ತಾಲೂಕಿನ ಶಿಕ್ಷಕರಾದ ಎಂ.ಎಸ್. ಹಿರೇಮಠ, ಎಲ್.ಎನ್. ನಂದೆಣ್ಣವರರನ್ನು ಗದಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ನಾಮನಿರ್ದೇಶಿತ ಸದಸ್ಯರಾಗಿ ನೇಮಕ ಮಾಡಲಾಯಿತು.
ಈ ವೇಳೆ ಮಣಕವಾಡ ಶ್ರೀಗಳು, ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ, ಜಿಲ್ಲಾಧ್ಯಕ್ಷ ಬಸವರಾಜ ಬಳ್ಳಾರಿ, ತಾಲೂಕಾ ನೌಕರರ ಸಂಘದ ಅಧ್ಯಕ್ಷ ಗುರುರಾಜ ಹವಳದ, ಕಾರ್ಯದರ್ಶಿ ಎಂ.ಎ. ನದಾಫ್, ಖಜಾಂಚಿ ಎಂ.ಡಿ. ವಾರದ, ಡಿ.ಎಚ್. ಪಾಟೀಲ, ಹೊನ್ನಪ್ಪ ಸಂಜೀವಣ್ಣವರ, ಎಸ್.ಎಚ್. ಉಮಚಗಿ ಮುಂತಾದವರಿದ್ದರು.



