ಡಾ. ಪಂಡಿತ ಪುಟ್ಟರಾಜ ರೈತ ಸಂಘದ ಪದಾಧಿಕಾರಿಗಳ ನೇಮಕ

0
puttaraja
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ನಿರೀಕ್ಷಣಾ ಮಂದಿರದಲ್ಲಿ ಶ್ರೀ ಡಾ. ಪಂಡಿತ ಪುಟ್ಟರಾಜ ರೈತ ಸಂಘದ ಸಂಸ್ಥಾಪಕ ಅಧ್ಯಕ್ಷ ಎಂ.ಪಿ. ಮುಳುಗುಂದ ನೇತೃತ್ವದಲ್ಲಿ ರೈತ ಸಂಘಕ್ಕೆ ಪದಾಧಿಕಾರಿಗಳನ್ನು ನೇಮಿಸಿ ಆದೇಶ ಪ್ರತಿಯನ್ನು ನೀಡಲಾಯಿತು.

Advertisement

ಕರ್ನಾಟಕ ರಾಜ್ಯ ಶ್ರೀ ಡಾ. ಪಂಡಿತ ಪುಟ್ಟರಾಜ ರೈತ ಸಂಘದ ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಲಲಿತಾ ಗುಳುಗುಳುಕಿ ಹಾಗೂ ಮಹಿಳಾ ಘಟಕ ರಾಜ್ಯ ಕಾರ್ಯದರ್ಶಿಯಾಗಿ ಜಯಶ್ರೀ ವಡ್ಡರ, ಗದಗ ಮಹಿಳಾ ಘಟಕದ ತಾಲೂಕ ಅಧ್ಯಕ್ಷರಾಗಿ ಶಂಶಾದಬೇಗಂ ಶಲವಡಿ, ಗದಗ ತಾಲೂಕ ಉಪಾಧ್ಯಕ್ಷರಾಗಿ ರೇಣುಕಾ ಕುರಿ, ಹೊಸೂರು ಗ್ರಾಮ ಘಟಕದ ಅಧ್ಯಕ್ಷರಾಗಿ ರಮೇಶ ಬಂಡಿವಡ್ಡರ ಇವರಿಗೆ ನೇಮಕಾತಿ ಆದೇಶ ಪ್ರತಿಯನ್ನು ನೀಡಲಾಯಿತು.

ಸಂಘದ ಗೌರವಾಧ್ಯಕ್ಷರಾಗಿ ಪರಮಪೂಜ್ಯ ಬಸವರಾಜ ಶರಣರು ಅಬ್ಬಿಗೇರಿ ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ರಾಜ್ಯ ರೈತ ಘಟಕದ ಪ್ರಧಾನ ಕಾರ್ಯದರ್ಶಿ ಅಣ್ಣಪ್ಪಗೌಡ ದೇಸಾಯಿ, ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ದಾವಲಸಾಬ ನಾಗನೂರ, ಉತ್ತರ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ರಮೇಶ ಚಲವಾದಿ, ಸಮಾಜ ಸೇವಕರಾದ ಮುರ್ತುಜಾ ಮುಲ್ಲಾ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು. ಹಾಜಿಅಲಿ ಎಚ್.ಕೊಪ್ಪಳ ನಿರ್ವಹಿಸಿದರು.


Spread the love

LEAVE A REPLY

Please enter your comment!
Please enter your name here