ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಿದರೆ ಸೂಕ್ತ ಕ್ರಮ

0
Spread the love

ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ: ಕೃತಕ ಅಭಾವ ಸೃಷ್ಟಿಸಿ ನಿಗದಿತ ಬೆಲೆಗಿಂತ ಹೆಚ್ಚಿನ ದರಕ್ಕೆ ಯೂರಿಯಾ ರಸಗೊಬ್ಬರ ಮಾರಾಟ ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕ ವಿ.ಸಿ. ಉಮೇಶ್ ಮಾರಾಟಗಾರರಿಗೆ ಎಚ್ಚರಿಕೆ ನೀಡಿದರು.

Advertisement

ಪಟ್ಟಣದ ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಸ್ಥಳೀಯ ಕೃಷಿ ಅಧಿಕಾರಿಯೊಂದಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿ ಅವರು ಮಾತನಾಡಿದರು.

ರಸಗೊಬ್ಬರ ಖರೀದಿಸಿದ ರೈತರಿಗೆ ಕಡ್ಡಾಯವಾಗಿ ನಿಗದಿತ ನಮೂನೆಯಲ್ಲಿ ರಸೀದಿ ನೀಡಬೇಕು. ಅಂಗಡಿಯ ಹೊರಗೆ ದಾಸ್ತಾನು ಲಭ್ಯತೆ ಮತ್ತು ದರಪಟ್ಟಿ ಹಾಕಬೇಕು. ತೂಕದ ಅಳತೆಯಲ್ಲಿ ವ್ಯತ್ಯಾಸ ಆಗದಂತೆ ನೋಡಿಕೊಳ್ಳಬೇಕು. ಕಳಪೆ ರಸಗೊಬ್ಬರ, ಬಿತ್ತನೆ ಬೀಜ ಹಾಗೂ ಯೂರಿಯಾ ಜೊತೆಗೆ ಲಿಂಕ್ ಮಾರಾಟ ಮಾಡುವುದು ಕಂಡು ಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ರೈತರು ಖಾಸಗಿ ಮಾರಾಟ ಮಳಿಗೆಗಳಿಂದ ಬೀಜ, ರಸಗೊಬ್ಬರ ಖರೀದಿಸುವಾಗ ತಪ್ಪದೇ ರಸೀದಿ ಪಡೆಯಬೇಕು. ಗರಿಷ್ಠ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳಿಗೆ ದೂರು ನೀಡಬೇಕು ಎಂದು ಸೂಚಿಸಿದರು.

ಮಣ್ಣು ಮತ್ತು ಪರಿಸರದ ಆರೋಗ್ಯದ ದೃಷ್ಟಿಯಿಂದ ಮೇಲುಗೊಬ್ಬರವಾಗಿ ಹರಳು ರೂಪದ ಯೂರಿಯಾ ರಸಗೊಬ್ಬರದ ಪರ್ಯಾಯವಾಗಿ ದ್ರವರೂಪದ ನ್ಯಾನೋ ಯೂರಿಯಾ ಬಳಸುವುದರಿಂದ ಉತ್ತಮ ಬೆಳೆ ಮತ್ತು ಹೆಚ್ಚಿನ ಇಳುವರಿಯನ್ನು ಪಡೆಯಬಹುದು ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here