ದೇವರಾಜ ಅರಸು ದೂರದೃಷ್ಟಿಯ ನೇತಾರ : ಮರಿಗೌಡ ಸುರಕೋಡ

0
Arasu 109th birthday celebration of D. Devaraja Arasu Bhavan
Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಹಿಂದುಳಿದ ವರ್ಗಗಳ ನೇತಾರ, ಮೌನ ಕ್ರಾಂತಿಯ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸು ಅವರು ಮುಂದಿನ ಪೀಳಿಗೆಯ ಬದುಕಿನ ದೂರದೃಷ್ಟಿಯಿಂದ ಅಂದಿನ ಕಾಲದಲ್ಲೇ ಕ್ರಾಂತಿಕಾರಿ ಹೆಜ್ಜೆಯನ್ನಿಟ್ಟಿದ್ದರು ಎಂದು ಶಿರಹಟ್ಟಿ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮರಿಗೌಡ ಸುರಕೋಡ ಹೇಳಿದರು.

Advertisement

ಅವರು ಮಂಗಳವಾರ ಶಿರಹಟ್ಟಿಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ.ದೇವರಾಜ ಅರಸು ಭವನದಲ್ಲಿ ಅರಸು ಅವರ 109ನೇ ಜನ್ಮದಿನಾಚರಣೆ ಸಂದರ್ಭದಲ್ಲಿ ಮಾತನಾಡಿದರು.

ಗೇಣಿ ಶಾಸನ, ಹಾವನೂರು ಆಯೋಗದಂತಹ ಪ್ರಮುಖ ನಿರ್ಧಾರಗಳನ್ನು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ತೆಗೆದುಕೊಂಡ ಹಿನ್ನೆಲೆಯಲ್ಲಿ ಅದರ ಪ್ರತಿಫಲ ಇಂದಿನ ಪೀಳಿಗೆಗೆ ಆಗುತ್ತಿದೆ. ಗೇಣಿ ಹೋರಾಟದ ಅನುಷ್ಠಾನ ಆಗಿದ್ದರೆ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಹಾವನೂರ ಆಯೋಗ ರಚಿಸದಿದ್ದರೆ ಈವರೆಗೂ ಬಹುಸಂಖ್ಯಾತರಿಗೆ ನ್ಯಾಯ ಸಿಗುತ್ತಿರಲಿಲ್ಲ. ಆದರೆ ದೇವರಾಜ ಅರಸು ಅವರು ತಮ್ಮ ನಿರ್ಧಾರದಿಂದ ಮುಂದಿನ ಪೀಳಿಗೆಯ ಬದುಕನ್ನು ರೂಪಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸಿದ್ದರು. ಇಂತಹ ಮಹನೀಯರ ಆದರ್ಶ ಸರ್ವಕಾಲಕ್ಕೂ ಮಾದರಿ ಎಂದರು.

ಇದೇ ಸಂದರ್ಭದಲ್ಲಿ 2023-24ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದ ನಿಲಯದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಎಂ.ಕೆ. ಹಿರೇಮಠ, ಕೆ.ಎ. ಬಳಿಗೇರ ಸೇರಿದಂತೆ ನಿಲಯ ಮೇಲ್ವಿಚಾರಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here