ಗದಗ: ಪಶ್ಚಿಮ ಪದವೀಧರ ಕ್ಷೇತ್ರದ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನ ನಡೆಯುತ್ತಿರುವ ಸಂದರ್ಭದಲ್ಲಿ ಗದಗ ನಗರದ ಮುನ್ಸಿಪಲ್ ಕಾಲೇಜಿನ ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ.

ಮತಗಟ್ಟೆ ಸಂಖ್ಯೆ 55 ಮತ್ತು 56ರ ಬಳಿ ಬಿಜೆಪಿ ಕಾರ್ಯಕರ್ತರು ಶಾಲು ಧರಿಸಿಕೊಂಡು ಮತಗಟ್ಟೆ ಆವರಣ ಪ್ರವೇಶಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಶಾಲು ಹಾಕಿಕೊಂಡು ಬಂದವರನ್ನು ಮತಗಟ್ಟೆ ಆವರಣದೊಳಗೆ ಯಾಕೆ ಬಿಡುತ್ತಿದ್ದೀರಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರನ್ನು ಪ್ರಶ್ನಿಸಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಮಾತಿನ ಚಕಮಕಿ ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
https://www.facebook.com/share/r/19kXUg3iBV/
ಒಂದೆಡೆ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದ ನಡೆಸುತ್ತಿದ್ದರೆ, ಮತ್ತೊಂದೆಡೆ ಬಿಜೆಪಿ ಕಾರ್ಯಕರ್ತರು ಜಯಘೋಷ ಮೊಳಗಿಸಿದರು. ಮತಗಟ್ಟೆ ಸುತ್ತಮುತ್ತ ಎರಡೂ ಪಕ್ಷಗಳ ಕಾರ್ಯಕರ್ತರ ಚಟುವಟಿಕೆಗಳಿಂದಾಗಿ ಕೆಲಕಾಲ ಬಿಗುವಿನ ವಾತಾವರಣ ಕಂಡುಬಂತು.








