ಬೆಂಗಳೂರು:- ನಗರದ ರಾಜಾನುಕುಂಟೆ ಬಳಿಯ ಖಾಸಗಿ ಕಾಲೇಜಿನಲ್ಲಿ ಬೈಕ್ ಪಾರ್ಕಿಂಗ್ ವಿಚಾರಕ್ಕೆ ವಿದ್ಯಾರ್ಥಿಗಳ ನಡುವಿನ ಗಲಾಟೆಯಲ್ಲಿ ಮೂವರಿಗೆ ಚಾಕುವಿನಿಂದ ಇರಿದ ಘಟನೆ ಜರುಗಿದೆ.
ಇಬ್ಬರಿಗೆ ಘಟನೆಯಲ್ಲಿ ಗಂಭೀರ ಗಾಯಗಳಾಗಿದೆ. ಮತ್ತೋರ್ವನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಲೇಜಿನ ವಿದ್ಯಾರ್ಥಿಯೊಬ್ಬ ಆತನ ಸ್ನೇಹಿತರೊಂದಿಗೆ ಸೇರಿಕೊಂಡು, ಮತ್ತೊಂದು ವಿದ್ಯಾರ್ಥಿಗಳ ಗುಂಪಿನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಹೆಲ್ಮೆಟ್‍ಗಳಲ್ಲಿ ಪರಸ್ಪರ ಬಡಿದಾಡಿಕೊಂಡಿದ್ದಾರೆ.
ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



