Indian Army: ಕಮರಿಗೆ ಬಿದ್ದ ಸೇನಾ ವಾಹನ: ಕರ್ನಾಟಕದ ಮೂವರು ಯೋಧರು ಸಾವು

0
Spread the love

ಬೆಂಗಳೂರು: 300 ಅಡಿ ಕಂದಕಕ್ಕೆ ಸೇನಾ ವಾಹನ ಬಿದ್ದು ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿರುವ ಘಟನೆ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್‌ನ ಬಲ್ನೋಯಿ ಪ್ರದೇಶದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ ನಿವಾಸಿ ಮಹೇಶ್ ನಾಗಪ್ಪ ಮಾರಿಗೊಂಡ (25), ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಬಿಜಾಡಿಯ ಯೋಧ ಅನೂಪ್, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕುಪ್ಪನವಾಡಿ ಗ್ರಾಮದ ಧರ್ಮರಾಜ ಸುಭಾಷ ಖೋತ ಸಾವಿಗೀಡಾಗಿದ್ದಾರೆ.

Advertisement

ಮಹಾಲಿಂಗಪುರದ ಮಹೇಶ್ ನಾಗಪ್ಪ ಮಾರಿಗೊಂಡ ಕಳೆದ ಆರು ವರ್ಷಗಳಿಂದ 11ನೇ ಮರಾಠಾ ರೆಜಿಮೆಂಟ್​​ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮೂರು ವರ್ಷದ ಹಿಂದೆ ಮಹೇಶ್ ನಾಗಪ್ಪ ಮಾರಿಗೊಂಡ ಅವರ ವಿವಾಹವಾಗಿತ್ತು.  ಯೋಧ ಅನೂಪ್ ಕಳೆದ 13 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅನುಪ್​ ದಂಪತಿಗೆ ಎರಡು ವರ್ಷದ ಪುಟ್ಟ ಮಗು ಇದೆ.

11 ಮರಾಠಾ ಲೈಟ್ ಇನ್‌ಫೆಂಟ್ರಿಯ ಸೇನಾ ವಾಹನವು ಸೋಮವಾರ (ಡಿ.24)ರ ಸಂಜೆ 5.30ರ ಸುಮಾರಿಗೆ ನಿಲಂ ಪ್ರಧಾನ ಕಚೇರಿಯಿಂದ ಎಲ್‌ಒಸಿ ಮೂಲಕ ಪೂಂಚ್​ ಜಿಲ್ಲೆಯ ಬನೋಯ್‌ ಘರೋವಾ ಪೋಸ್ಟ್‌ಗೆ ತೆರಳುತ್ತಿತ್ತು. ಮಾರ್ಗ ಮಧ್ಯೆ ಘರೋವಾ ಪ್ರದೇಶದಲ್ಲಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ ಎಂದು ಪೊಲೀಸರು ತಿಳಿಸಿದ್ದರು.


Spread the love

LEAVE A REPLY

Please enter your comment!
Please enter your name here