ಸುವರ್ಣಸೌಧದಲ್ಲಿ ಅರೆಸ್ಟ್ ಪ್ರಕರಣ: ರಾಜ್ಯಪಾಲರಿಗೆ ದೂರು ಕೊಟ್ಟ ಸಿಟಿ ರವಿ, ಭದ್ರತೆಗೆ ಒತ್ತಾಯ!

0
Spread the love

ಬೆಂಗಳೂರು:- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯವಾಗಿ ಪದ ಬಳಕೆ ಮಾಡಿದ ಆರೋಪ ಹಿನ್ನೆಲೆ ಸಿಟಿ ರವಿ ಅವರನ್ನು ವಿಧಾನಸೌಧದಲ್ಲಿ ಡಿ.19 ರಂದು ಬಂಧಿಸಲಾಗಿತ್ತು.

Advertisement

ಬಳಿಕ ಹೈಕೋರ್ಟ್ ನಿಂದ ಜಾಮೀನು ಪಡೆದು ಸಿಟಿ ರವಿ ಹೊರ ಬಂದರು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಟಿ ರವಿ ಅವರು ರಾಜ್ಯಪಾಲರಿಗೆ ದೂರು ಕೊಟ್ಟಿದ್ದಾರೆ.

ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ರಾಜ್ಯಪಾಲರಿಗೆ 8 ಪುಟಗಳ ದೂರು ಸಲ್ಲಿಸಿದ್ದಾರೆ. ಪೊಲೀಸ್ ದೌರ್ಜನ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರೋಪಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಫೇಕ್ ಎನ್‌ಕೌಂಟರ್ ಸಂಚು ಮತ್ತು ಅಕ್ರಮ ಬಂಧನದ ಬಗ್ಗೆಯೂ ದೂರಿನಲ್ಲಿ ವಿವರಿಸಲಾಗಿದೆ. ಸಂಬಂಧಿತ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು ತನಗೆ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದಾರೆ.

ಡಿ.19ರಂದು ಇಡೀ ರಾತ್ರಿ ನಡೆದ ಪೊಲೀಸರ ಅಮಾನವೀಯ ವರ್ತನೆ ಮಾಡಿದ್ದಾರೆ. ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಬೆಳಗಾವಿ ನಗರ ಪೊಲೀಸ್ ಕಮಿಷನರ್​​ ಯಡಾ ಮಾರ್ಟಿನ್​, ಎಸ್‌ಪಿ ಗುಳೇದ್ ಮತ್ತು ಇತರೆ ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದು, ತಮಗೆ ಪ್ರಾಣಾಪಾಯ ಇದ್ದು, ಸೂಕ್ತ ಭದ್ರತೆ ಕೊಡಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ರಾಷ್ಟ್ರಪತಿ, ಕೇಂದ್ರ ಗೃಹ ಇಲಾಖೆ ಗಮನಕ್ಕೂ ತರುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದು, ದೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧವೂ ಆರೋಪ ಮಾಡಿದ್ದಾರೆ.

ಡಿಕೆ ಶಿವಕುಮಾರ್​ ಸೂಚನೆ ಮೇರೆಗೆ ಪೊಲೀಸರು ಸುಪಾರಿ ಕಿಲ್ಲರ್ ರೀತಿ ವರ್ತಿಸಿದರು. ನಿಗೂಢ ಸ್ಥಳಗಳಿಗೆ ಕರೆದೊಯ್ದು ಫೇಕ್ ಎನ್‌ಕೌಂಟರ್ ಮಾಡಲು ಸಂಚು ರೂಪಿಸಿದ್ದರು. ಪೊಲೀಸರು ಸುವರ್ಣಸೌಧದೊಳಗೆ ಪ್ರವೇಶ ಮಾಡಿ ಬಂಧಿಸಿದ್ದು, ಅಕ್ರಮ ನನ್ನ ಹಕ್ಕು ಚ್ಯುತಿ ಆಗಿದೆ ಎಂದಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಕೊಲೆ ಮಾಡಿವುದಾಗಿ ಧಮ್ಕಿ ಹಾಕಿದ್ದು, ಅವರ ಬಂಟರಿಂದಲು ಕೂಡ ಫೇಕ್ ಎನ್‌ಕೌಂಟರ್ ಸಂಚು ಆರೋಪ ಮಾಡಿದ್ದಾರೆ. ಸದನದ ವ್ಯಾಪ್ತಿಯಲ್ಲಿ ನಡೆದ ಘಟನೆ ಬಗ್ಗೆ ತನಿಖೆ ನಡೆಸುವ ಅಧಿಕಾರ ಸಿಐಡಿಗಿಲ್ಲ. ಘಟನೆ ನಡೆದ ಸ್ಥಳ ಸಿಐಡಿ ವ್ಯಾಪ್ತಿಗೂ ಬರುವುದಿಲ್ಲ. ನನ್ನ ಬಂಧನ ಅಕ್ರಮ, ಕಾನೂನು ವಿರೋಧಿ ಅಂತ ಹೈಕೋರ್ಟ್ ಅಭಿಪ್ರಾಯಪಟ್ಟಿದೆ ಎಂದು ಸುದೀರ್ಘ ದೂರಿನಲ್ಲಿ ಹಲವು ಅಂಶಗಳನ್ನು ಉಲ್ಲೇಖಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here