ವಿಜಯಸಾಕ್ಷಿ ಸುದ್ದಿ, ಗದಗ: ಬೆಳಗಾವಿಯ ಬಾಳೇಕುಂದ್ರಿ ಬಸ್‌ನಲ್ಲಿ ನಿರ್ವಾಹಕರು ಕನ್ನಡದಲ್ಲಿ ಮಾತನಾಡಿದರು ಎಂಬ ಕಾರಣಕ್ಕೆ ನಿರ್ವಾಹಕನ ಮೇಲೆ ಹಲ್ಲೆ ನಡೆಸಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣಶೆಟ್ಟಿ ಬಣ ತೀವ್ರವಾಗಿ ಖಂಡಿಸಿದೆ.
Advertisement
ಹಲ್ಲೆ ಮಾಡಿದ ಮರಾಠಿ ಪುಂಡರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ಕಾನೂನು ಪ್ರಕಾರ ತಪ್ಪಿತಸ್ಥರನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕು. ಇಲ್ಲದೆ ಹೋದಲ್ಲಿ ಎಲ್ಲ ಕನ್ನಡ ಪರ ಸಂಘಟನೆಗಳೊಂದಿಗೆ ತೀವ್ರವಾದ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣಶೆಟ್ಟಿ ಬಣದ ಗದಗ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ಆರ್.ಬೇಲೂರ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.