ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಆನೆಗುಂದಿ ಗ್ರಾಮದ ಜಮೀನೊಂದರಲ್ಲಿ ಅರಿಶಿಣ ಬೆಳೆಯ ಮಧ್ಯೆ ಬೆಳೆಯಲಾಗಿದ್ದ ಗಾಂಜಾ ಗಿಡಗಳನ್ನು ಹನೂರು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹನೂರು ತಾಲೂಕಿನ ಆನೆಗುಂದಿ ಗ್ರಾಮದ ಎಸ್ ಬಾಲು (65) ಹಾಗೂ ಇವರ ಮಗ ಮಹಾಲಿಂಗ (35) ರನ್ನು ಪೊಲೀಸರು ಬಂಧಿಸಿದ್ದಾರೆ.
Advertisement
ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಆನೆಗುಂದಿ ಗ್ರಾಮದ ಜಮೀನೊಂದರಲ್ಲಿ ಅಕ್ರಮ ಗಾಂಜಾ ಗಿಡಗಳನ್ನು ಬೆಳೆದಿದ್ದರು. ಇದರ ಖಚಿತ ಮಾಹಿತಿ ಮೇರೆಗೆ ಹನೂರು ಪೊಲೀಸರು ದಾಳಿ ನಡೆಸಿ ಅರಿಶಿಣ ಬೆಳೆಯ ಮಧ್ಯೆ ಬೆಳೆಯಲಾಗಿದ್ದ ಸುಮಾರು 2 ಲಕ್ಷ ಮೌಲ್ಯದ 95 ಗಾಂಜಾ (34 ಕೆಜಿ) ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳಾದ ಬಾಲು ಹಾಗೂ ಮಹಾಲಿಂಗರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.