ಮಂಡ್ಯ: ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡುತಿದ್ದ ಇರಾನಿ ಗ್ಯಾಂಗ್ ಸದಸ್ಯನನ್ನು ಮಂಡ್ಯದ ಮದ್ದೂರು ಠಾಣೆ ಪೊಲೀಸರ ಕಾರ್ಯಾಚರಣೆ ನಡೆಸಿ ಬಂಧಸಿದ್ದಾರೆ.
ಬೀದರ್ ಮೂಲದ ಜಾವೀದ್ ಬಾಲಿ(45) ಬಂಧಿತ ಆರೋಪಿಯಾಗಿದ್ದು, ಬಂಧಿತನಿಂದ ಸುಮಾರು 28 ಲಕ್ಷ ರೂ ಮೌಲ್ಯದ 435 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ.
ಸುಮಾರು ಹನ್ನೊಂದು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಬೀದರ್ ನಿಂದ ಮಂಡ್ಯಕ್ಕೆ ಕಾರಿನಲ್ಲಿ ಬಂದು ಸರಕಳ್ಳತನ ಮಾಡುತ್ತಿದ್ದನು.
ಮಂಡ್ಯದಲ್ಲಿ ಬೈಕ್ ಎಸ್ಕೇಪ್ ಮಾಡಿ ಸರಗಳ್ಳತನ ಮಾಡುತ್ತಿದ್ದು, ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದನು. ಕಳೆದ ತಿಂಗಳು ಮದ್ದೂರಿನಲ್ಲಿ ವೃದ್ದೆಗೆ ಸಾಯಿಬಾಬ ಭಕ್ತನ ಸೋಗಿನಲ್ಲಿ 62 ಗ್ರಾಂ ಚಿನ್ನದಸರ ಕಸಿದು ಪರಾರಿಯಾಗಿದ್ದ.
ಮಂಡ್ಯ ಹಾಗೂ ರಾಮನಗರ ಜಿಲ್ಲೆಯಲ್ಲಿ ಸರಗಳ್ಳತನ ಮಾಡಿದ್ದ ಆರೋಪಿ ಬೀದರ್ ಗೆ ಎಸ್ಕೇಪ್ ಆಗಿದ್ದ. ಸದ್ಯ ಮದ್ದೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಜಾವೀದ್ ಬಾಲಿಗೆ ಸಾಥ್ ನೀಡಿದ್ದ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಆತನಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.


