ಉಡುಪಿ: ಮುಂಬರುವ ಕನ್ನಡ ಚಿತ್ರ ‘ಕಾಂತಾರ: ಚಾಪ್ಟರ್ 1’ ಚಿತ್ರೀಕರಣದ ವೇಳೆ ಕಿರಿಯ ಕಲಾವಿದರೊಬ್ಬರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಂ ಸ್ಟೇಯಲ್ಲಿ ಮೃತಪಟ್ಟಿದ್ದಾರೆ.
Advertisement
ವಿಜು ವಿ. ಕೆ ಎಂಬ ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ಮೃತ ದುರ್ಧೈವಿಯಾಗಿದ್ದು, ಕಾಂತರ ಚಲನಚಿತ್ರಕ್ಕಾಗಿ ಆಗುಂಬೆ ಸಮೀಪದ ಹೋಂ ಸ್ಟೇ ಒಂದರಲ್ಲಿ ತಂಗಿದ್ದ ವಿಜು ಅವರಿಗೆ ನಿನ್ನೆ ರಾತ್ರಿ ಏಕಏಕಿ ಎದೆ ನೋವು ಕಾಣಿಸಿಕೊಂಡಿದೆ.
ತಕ್ಷಣವೇ ಅವರನ್ನ ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿ ಮೃತ ದೇಹ ಇರಿಸಲಾಗಿದೆ. ಕೇರಳದಿಂದ ಕುಟುಂಬಸ್ಥರು ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ