ವಿಜಯಸಾಕ್ಷಿ ಸುದ್ದಿ, ಗದಗ: ರಂಗಭೂಮಿ, ಕಿರುತೆರೆ ಹಾಗೂ ಚಲನಚಿತ್ರ ಕ್ಷೇತ್ರದಲ್ಲಿ ಕಲಾವಿದರಾಗಿ ಗುರುತಿಸಿಕೊಂಡಿದ್ದ ವಿಜಯಕುಮಾರ ವಾಸುದೇವಸಾ ಜಿತೂರಿ (೬೪) ಅವರು ಸೋಮವಾರ ಬೆಟಗೇರಿಯ ಸ್ವಗೃಹದಲ್ಲಿ ನಿಧನರಾದರು.
ಅವರ ನಿಧನದ ಬಳಿಕ ಕುಟುಂಬದವರು ಮಾನವೀಯ ನಿರ್ಧಾರ ಕೈಗೊಂಡಿದ್ದು, ನೇತ್ರದಾನಕ್ಕೆ ಸಮ್ಮತಿ ಸೂಚಿಸಿದ್ದಾರೆ. ಗದಗ-ಬೆಟಗೇರಿ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಮನವಿಗೆ ಸ್ಪಂದಿಸಿದ ಕುಟುಂಬಸ್ಥರ ಒಪ್ಪಿಗೆಯ ಮೇರೆಗೆ ನೇತ್ರ ತಜ್ಞರ ತಂಡ ನೇತ್ರದಾನ ಪ್ರಕ್ರಿಯೆ ನೆರವೇರಿಸಿತು.
ವಿಜಯಕುಮಾರ ಜಿತೂರಿ ಅವರು ತಾಯಿ, ಪತ್ನಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆ ಮಂಗಳವಾರ ಮಧ್ಯಾಹ್ನ ಬೆಟಗೇರಿಯಲ್ಲಿ ನೆರವೇರಿತು.
ಲಯನ್ಸ್ ಕ್ಲಬ್‌ನ ರಮೇಶ ಶಿಗ್ಲಿ, ರಾಜಣ್ಣ ಮಲ್ಲಾಡದ, ಗಣಪತಸಾ ಮೇರವಾಡೆ ಸೇರಿದಂತೆ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.



