ಬಾಲಿವುಡ್ ನಟ ಸಲ್ಮಾನ್ ಖಾನ್ ಸಾಕಷ್ಟು ಸಮಯದಿಂದ ಜೀವ ಬೆದರಿಕೆ ಕರೆಗಳನ್ನು ಎದುರಿಸುತ್ತಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸದಸ್ಯರು ಸಲ್ಮಾನ್ ಖಾನ್ ಅವರನ್ನು ಹತ್ಯೆ ಮಾಡುವುದಾಗಿ ಪದೇ ಪದೇ ಬೆದರಿಕೆ ಹಾಕುತ್ತಿದ್ದಾರೆ. ಹೀಗಾಗಿ ಸಲ್ಮಾನ್ ಅವರ ಸುತ್ತ ಮುತ್ತ ಸಾಕಷ್ಟು ಸೆಕ್ಯೂರಿಟಿ ಗಾರ್ಡ್ ಗಳು ಇರುತ್ತಾರೆ. ಸಲ್ಮಾನ್ ಖಾನ್ ಮನೆಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಸಲ್ಮಾನ್ ಮೌನ ಮುರಿದಿದ್ದಾರೆ.
‘ಭಗವಾನ್, ಅಲ್ಲಾ.. ಎಲ್ಲವೂ ಅವನ ಮೇಲಿದೆ. ಎಷ್ಟು ಆಯಸ್ಸು ಬರೆದಿದೆಯೋ ಅಷ್ಟೇ. ಕೆಲವೊಮ್ಮೆ ಇಷ್ಟು ಜನರನ್ನು ಒಟ್ಟಿಗೆ ಇಟ್ಟುಕೊಂಡು ಹೋಗಬೇಕಾಗುತ್ತದೆ. ಅದೇ ಸಮಸ್ಯೆ ಆಗಿಬಿಡುತ್ತದೆ’ ಎಂದು ಸಲ್ಮಾನ್ ಖಾನ್ ಅವರು ಹೇಳಿದ್ದಾರೆ.
1998ರಲ್ಲಿ ‘ಹಮ್ ಸಾಥ್ ಸಾಥ್ ಹೈ’ ಸಿನಿಮಾದ ಶೂಟಿಂಗ್ ವೇಳೆ ಕೃಷ್ಣಮೃಗ ಬೇಟೆ ಆಡಿದ ಆರೋಪ ಸಲ್ಮಾನ್ ಖಾನ್ ಮೇಲೆ ಎದುರಾಯಿತು. ಆಗಿನಿಂದಲೂ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ಬರುತ್ತಲೇ ಇದೆ. ಅವರನ್ನು ಹತ್ಯೆ ಮಾಡಬೇಕು ಎಂದು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನವರು ಪ್ರಯತ್ನಿಸುತ್ತಲೇ ಇದ್ದಾರೆ. ಬಹಿರಂಗವಾಗಿಯೇ ಕೊಲೆ ಬೆದರಿಗೆ ಹಾಕಲಾಗುತ್ತಿದೆ. ಹೀಗಾಗಿ ಸಲ್ಮಾನ್ ಖಾನ್ ಸದಾ ಬಾಡಿ ಗಾರ್ಡ್ ಗಳ್ ಜೊತೆಯಲ್ಲಿಯೇ ಪ್ರಯಾಣಿಸುತ್ತಾರೆ. ಜೊತೆಗೆ ಮನೆಯ ಸುತ್ತಮುತ್ತ ಸಾಕಷ್ಟು ಭದ್ರತೆ ನೀಡಲಾಗಿದೆ. ಇದು ಸಲ್ಮಾನ್ ಖಾನ್ ಅವರಿಗೆ ಬೇಸರ ತರಿಸಿದ್ದೆ. ಆದರೆ ಅನಿವಾರ್ಯದಿಂದಾಗಿ ಅವರು ಬಾಡಿಗಾರ್ಡ್ ಜೊತೆಯೇ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೂ ಸಿನಿಮಾದ ವಿಷಯಕ್ಕೆ ಬಂದ್ರೆ ಸಲ್ಮಾನ್ ಖಾನ ಸದ್ಯ ಎ.ಆರ್. ಮುರುಗದಾಸ್ ನಿರ್ದೇಶನದ ‘ಸಿಕಂದರ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.ಚಿತ್ರದಲ್ಲಿ ಸಲ್ಮಾನ್ ಗೆ ಜೋಡಿಯಾಗಿ ನಟಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದು ಏಪ್ರಿಲ್ 30ರಂದು ಚಿತ್ರ ಬಿಡುಗಡೆ ಆಗಲಿದೆ.