ಮುಂಬೈ:- ಪದ್ಮವಿಭೂಷಣ ಪುರಸ್ಕೃತ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು, ವೈದ್ಯರ ಶ್ರಮದ ನಡುವೆಯೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ವಯೋಸಹಜ ಸಮಸ್ಯೆಗಳಿಂದಲೂ ಅವರು ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ಹಿಂದಿ ಮಾತ್ರವಲ್ಲದೆ ಕನ್ನಡ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಭಾಷೆಗಳಲ್ಲಿ 12,000ಕ್ಕೂ ಅಧಿಕ ಹಾಡುಗಳನ್ನು ಹಾಡಿರುವ ಆಶಾ ಭೋಸ್ಲೆ ಅವರು, ಪಾಪ್, ಗಜಲ್ ಹಾಗೂ ಶಾಸ್ತ್ರೀಯ ಸಂಗೀತ ಕ್ಷೇತ್ರದಲ್ಲೂ ಅಪಾರ ಹೆಸರು ಗಳಿಸಿದ್ದರು.
ಅವರ ನಿಧನಕ್ಕೆ ಸಂಗೀತ ಕ್ಷೇತ್ರದ ಗಣ್ಯರು ಹಾಗೂ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.



